
ನವದೆಹಲಿ: ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದನ್ನು ಟೀಕಿಸಿರುವ ಕಾಂಗ್ರೆಸ್, ಮೋದಿ ಅವರು ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿರುವುದನ್ನು ಗಾಳಿಯೊಂದಿಗಿನ ಗುದ್ದಾಟ ಎಂದು ಹೇಳಿದೆ.
ಕೇವಲ ವಾಗ್ದಾಳಿಗಳು ಪಾಕಿಸ್ತಾನದ ವಿರುದ್ಧದ ಕ್ರಮಕ್ಕೆ ಪರ್ಯಾಯವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಕಾಂಗ್ರೆಸ್, ಮೋದಿ ಗಾಳಿಯೊಂದಿಗೆ ಗುದ್ದಾಡುತ್ತಿದ್ದಾರೆ. ಈ ಮೂಲಕ ತಮ್ಮ ಸರ್ಕಾರದ ಅಸಮರ್ಥತೆಯನ್ನು ಮುಚ್ಚಿಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮನೀಷ್ ತಿವಾರಿ ಹೇಳಿದ್ದಾರೆ.
ಕೇರಳದ ಕೋಯಿಕ್ಕೋಡ್ ನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಇಡೀ ಏಷ್ಯಾದಲ್ಲಿ ಒಂದೇ ಒಂದು ರಾಷ್ಟ್ರ ಮಾತ್ರ ರಕ್ತಪಾತವನ್ನು ಬಯಸುತ್ತಿದೆ ಎಂದು ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದರು.
Advertisement