ರೋಡ್ ಶೋ ವೇಳೆ ರಾಹುಲ್ ಗಾಂಧಿ ಮೇಲೆ ಶೂ ಎಸೆತ

ಉತ್ತರ ಪ್ರದೇಶದಲ್ಲಿ ರೋಡ್ ಶೋ ನಡೆಸುತ್ತಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೇಲೆ ಶೂ ಎಸೆದ ಘಟನೆ ಸೋಮವಾರ ನಡೆದಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on
ಸೀತಾಪುರ: ಉತ್ತರ ಪ್ರದೇಶದಲ್ಲಿ ರೋಡ್ ಶೋ ನಡೆಸುತ್ತಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೇಲೆ ಶೂ ಎಸೆದ ಘಟನೆ ಸೋಮವಾರ ನಡೆದಿದೆ.
ಇಂದು ಬೆಳಗ್ಗೆ ಸೀತಾಪುರದಲ್ಲಿ ತೆರೆದ ವಾಹನದಲ್ಲಿ ತೆರಳುತ್ತಿದ್ದ ರಾಹುಲ್ ಗಾಂಧಿ ಮೇಲೆ ಕಿಡಿಗೇಡಿಯೊಬ್ಬ ಶೂ ಎಸೆದಿದ್ದು, ಅದೃಷ್ಟವಶಾತ್ ಶೂ ರಾಹುಲ್ ಗಾಂಧಿ ಅವರಿಗೆ ತಗುಲಿಲ್ಲ. ಆದರೆ ಶೂ ಎಸೆದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಉಪಾಧ್ಯಕ್ಷ ಸುಮಾರು 2500 ಕಿ.ಮೀ ವರೆಗೆ ಕಿಸಾನ್ ಮಹಾಯಾತ್ರೆಯನ್ನು ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com