ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ತಂದೆಗೆ ಗುಂಡಿಕ್ಕಿದ ಮಗ

ಉತ್ತರ ಪ್ರದೇಶದ ಫರುಖಾಬಾದ್ ಜಿಲ್ಲೆಯಲ್ಲಿ ಯುವಕನೊಬ್ಬ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ತನ್ನ ತಂದೆಯ ಮೇಲೆ ಗುಂಡು ಹಾರಿಸಿದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕಾನ್ಪುರ: ಉತ್ತರ ಪ್ರದೇಶದ ಫರುಖಾಬಾದ್ ಜಿಲ್ಲೆಯಲ್ಲಿ 25 ವರ್ಷದ ಯುವಕನೊಬ್ಬ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ತನ್ನ ತಂದೆಯ ಮೇಲೆ ಗುಂಡು ಹಾರಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ಉಮದ್ ಪುರದ ಶಂಷಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಂದೆ ರಥಿರಾಮ್ ನನ್ನ ಪತ್ನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಶನಿವಾರ ರಾತ್ರಿಯೂ ಅದೇ ರೀತಿ ಮಾಡಿದಾಗ ಗುಂಡಿಕ್ಕಿರುವುದಾಗಿ ಆರೋಪಿ ಅಮಿತ್  ಪೊಲೀಸರಿಗೆ ತಿಳಿಸಿದ್ದಾನೆ.
ಮಗನ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ರಥಿರಾಮ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಅಮಿತ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com