ಅಧಿಕಾರಿಗಳ ಕಿರುಕುಳ ಕುಟುಂಬದೊಂದಿಗೆ ಆತ್ಮಹತ್ಯೆಗೆ ಶರಣಾಗುವಂತೆ ಮಾಡಿತ್ತು: ಬಿಕೆ. ಬನ್ಸಾಲ್

ಸಿಬಿಐ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳವೇ ಕುಟುಂಬದೊಂದಿಗೆ ಆತ್ಮಹತ್ಯೆಗೆ ಶರಣಾಗಲು ಕಾರಣ ಎಂದು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಕಾರ್ಪೊರೇಟ್‌ ವ್ಯವಹಾರಗಳ...
ಕಾರ್ಪೊರೇಟ್‌ ವ್ಯವಹಾರಗಳ ಮಾಜಿ ಮಹಾ ನಿರ್ದೇಶಕ ಬಿ.ಕೆ.ಬನ್ಸಾಲ್‌
ಕಾರ್ಪೊರೇಟ್‌ ವ್ಯವಹಾರಗಳ ಮಾಜಿ ಮಹಾ ನಿರ್ದೇಶಕ ಬಿ.ಕೆ.ಬನ್ಸಾಲ್‌
Updated on

ನವದೆಹಲಿ: ಸಿಬಿಐ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳವೇ ಕುಟುಂಬದೊಂದಿಗೆ ಆತ್ಮಹತ್ಯೆಗೆ ಶರಣಾಗಲು ಕಾರಣ ಎಂದು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಕಾರ್ಪೊರೇಟ್‌ ವ್ಯವಹಾರಗಳ ಮಾಜಿ ಮಹಾ ನಿರ್ದೇಶಕ ಬಿ.ಕೆ.ಬನ್ಸಾಲ್‌ ಅವರು ಹೇಳಿಕೊಂಡಿದ್ದಾರೆ.

2 ತಿಂಗಳ ಹಿಂದಷ್ಟೇ ಬನ್ಸಾಲ್ ಅವರ ಪತ್ನಿ ಸತ್ಯಬಾಲಾ ಮತ್ತು ಮಗಳು ನೇಹಾ ಪೂರ್ವ ದೆಹಲಿಯ ನೀಲಕಂಠ ಅಪಾರ್ಟ್ ಮೆಂಟ್ ವೊಂದರಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ನಿನ್ನೆ ಕೂಡ ಬನ್ಸಾಲ್ ಅವರು ದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಡೆತ್ ನೋಟ್ ಬರೆದಿಟ್ಟು ಮಗನೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದರು.

ಇದೀಗ ಡೆತ್ ನೋಟ್ ನಲ್ಲಿರುವ ಕೆಲ ಸತ್ಯಾಂಶಗಳು ಬಹಿರಂಗಗೊಂಡಿದ್ದು, ಸಿಬಿಐ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳವೇ ಕುಟುಂಬದೊಂದಿಗೆ ಆತ್ಮಹತ್ಯೆಗೆ ಶರಣಾಗಲು ಕಾರಣ ಎಂದು ಬನ್ಸಾಲ್ ಅವರು ಹೇಳಿಕೊಂಡಿದ್ದಾರೆಂದು ತಿಳಿದುಬಂದಿದೆ.

ಜೈಲಿನಲ್ಲಿದ್ದಾಗ ಸಿಬಿಐನ ಇಬ್ಬರು ಮಹಿಳಾ ಅಧಿಕಾರಿಗಳು ನನ್ನ ಪತ್ನಿ ಹಾಗೂ ಮಗಳ ಕೆನ್ನೆಗೆ ಹೊಡೆದಿದ್ದರು. ನಿನ್ನ ಪತಿ ಹಾಗೂ ಮಗನನ್ನು ತುಂಡು ತುಂಡಾಗಿ ಕತ್ತರಿಸಿ ನಾಯಿಗಳಿಗೆ ತಿನ್ನಿಸುತ್ತೇವೆಂದು ಹೇಳಿದ್ದರು. ನನ್ನ ಪತ್ನಿಗೆ ಕಿರುಕುಳ ನೀಡಬೇಡಿ ಎಂದು ಹಿರಿಯ ಅಧಿಕಾರಿಗೆ ಮನವಿ ಮಾಡಿದೆ. ಈ ವೇಳೆ ಕಿರುಕುಳ ನೀಡದಿದ್ದರೆ, ನಾನು ಅಧಿಕಾರಿಯಾಗಲು ಸಾಧ್ಯವಿಲ್ಲ. ನಾನು ಆಡಳಿತಾರೂಢ ಪಕ್ಷದ ರಾಜಕೀಯ ಗಣ್ಯರೊಂದಿಗೆ ಸಂಪರ್ಕವನ್ನು ಹೊಂದಿದ್ದು, ಏನನ್ನು ಬೇಕಾದರೂ ಮಾಡಬಲ್ಲೆ ಎಂದು ಬೆದರಿಕೆ ಹಾಕಿದರು ಎಂದು ಬನ್ಸಾಲ್ ಡೆತ್ ನೋಟ್ ನಲ್ಲಿ ಹೇಳಿಕೊಂಡಿದ್ದಾರೆ. ಅಲ್ಲದೆ, ಮೂವರು ಅಧಿಕಾರಿಗಳ ಹೆಸರನ್ನೂ ಸೂಚಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಬಿ.ಕೆ. ಬನ್ಸಾಲ್ ಮತ್ತು ಅವರ ಪುತ್ರ ಯೋಗೇಶ್ ಬನ್ಸಾಲ್ ಅವರು ಬರೆದಿರುವ ಪತ್ರವನ್ನು ವಶಕ್ಕೆ ಪಡೆಯಲಾಗಿದೆ. ಡೆತ್ ನೋಟ್ ನಲ್ಲಿ ಕೆಲ ಆರೋಪಗಳು ಕೇಳಿಬಂದಿವೆ. ಹೀಗಾಗಿ ತನಿಖೆ ನಡೆಸಲು ತೀರ್ಮಾನಿಸಲಾಗಿದೆ. ನಿಯಮಗಳನ್ನು ಉಲ್ಲಂಘಿಸಿರುವುದೇ ಆಗಿದ್ದಲ್ಲಿ ಸಿಬಿಐ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಯಾಗಿದ್ದ ಬನ್ಸಾಲ್ ಅವರು ಔಷಧ ಕಂಪನಿಯೊಂದರಿಂದ ರು.90 ಲಕ್ಷ ಹಣವನ್ನು ಲಂಚ ಪಡೆದ ಆರೋಪದಲ್ಲಿ ಸಿಬಿಐ ಅಧಿಕಾರಿಗಳು ಜುಲೈ 16 ರಂದು ಬಂಧನಕ್ಕೊಳಪಡಿಸಿದ್ದರು. ಬನ್ಸಾಲ್ ಅವರ ಮನೆಯ ಮೇಲೆ ದಾಳಿ ಮಾಡಿದ್ದ ಸಿಬಿಐ ಅಧಿಕಾರಿಗಳು, ಮನೆಯಲ್ಲಿದ್ದ ರು.60 ಲಕ್ಷ ನಗದು ಹಾಗೂ 20 ಆಸ್ಪಿಪಾಸ್ತಿಗಳ ದಾಖಲೆ ಪತ್ರಗಳು, 60 ಬ್ಯಾಂಕ್ ಖಾತೆ ಪುಸ್ಕತಗಳನ್ನು ವಶಕ್ಕೆ ಪಡೆದಿತ್ತು. .

ಬನ್ಸಾಲ್ ಅವರನ್ನು ಬಂಧನಕ್ಕೊಳಪಡಿಸಿದ ಕೇವಲ ಎರಡು ದಿನದಲ್ಲೇ ಅವರ ಪತ್ನಿ ಹಾಗೂ ಪುತ್ರಿ ಆತ್ಮಹತ್ಯೆಗೆ ಶರಣಾಗಿದ್ದರು. ಆಗಸ್ಟ್ 26 ರಂದು ಬನ್ಸಾಲ್ ಅವರಿಗೆ ಜಾಮೀನು ದೊರೆತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com