ವಿದೇಶಾಂಗ ಕಾರ್ಯದರ್ಶಿಯಿಂದ ಸೇನಾ ದಾಳಿ ಬಗ್ಗೆ 22 ದೇಶಗಳ ರಾಯಭಾರಿಗಳಿಗೆ ಮಾಹಿತಿ

ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರು ಭಾರತೀಯ ಸೇನೆ ಬುಧವಾರ ತಡರಾತ್ರಿ ಪಾಕಿಸ್ತಾನ ಉಗ್ರರ ಶಿಬಿರಗಳ ಮೇಲೆ...
ಜೈಶಂಕರ್
ಜೈಶಂಕರ್
ನವದೆಹಲಿ: ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರು ಭಾರತೀಯ ಸೇನೆ ಬುಧವಾರ ತಡರಾತ್ರಿ ಪಾಕಿಸ್ತಾನ ಉಗ್ರರ ಶಿಬಿರಗಳ ಮೇಲೆ ನಡೆಸಿದ ಸೀಮಿತ ದಾಳಿಯ ಬಗ್ಗೆ 22 ದೇಶಗಳ ರಾಯಭಾರಿಗಳಿಗೆ ಗುರುವಾರ ಮಾಹಿತಿ ನೀಡಿದ್ದಾರೆ. 
ಎಎನ್ಐ ವರದಿಯ ಪ್ರಕಾರ, ಪಿ 5 ರಾಷ್ಟ್ರಗಳು ಸೇರಿದಂತೆ 22 ದೇಶಗಳ ರಾಯಭಾರಿಗಳಿಗೆ ಭಾರತೀಯ ಸೇನಾ ಕಾರ್ಯಾಚರಣೆ ಬಗ್ಗೆ ಹಾಗೂ ಗಡಿ ನಿಯಂತ್ರಣ ರೇಖೆಯ ಪರಿಸ್ಥಿತಿ ಬಗ್ಗೆ ವಿದೇಶಾಂಗ ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಹಮಿದ್ ಅನ್ಸಾರಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಸೇರಿದಂತೆ ಗಡಿ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಪಾಕ್ ವಿರುದ್ಧ ಸೇನಾ ದಾಳಿ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ನಿನ್ನೆ ರಾತ್ರಿ ಭಾರತೀಯ ಸೇನೆ ಗಡಿ ನಿಯಂತ್ರಣ ರೇಖೆ ಬಳಿ ಇದ್ದ ಏಳು ಉಗ್ರರ ಶಿಬಿರಗಳ ಮೇಲೆ ಸೀಮಿತ ದಾಳಿ ನಡೆಸಿದ್ದು, ದಾಳಿಯಲ್ಲಿ ಸುಮಾರು 40ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com