ಪಂಜಾಬ್ ನಿಂದ ಕಾಶ್ಮೀರವರೆಗಿನ ಹಳ್ಳಿಗಳ ಸ್ಥಳಾಂತರ, ಸಂಭವನೀಯ ಪಾಕ್ ದಾಳಿ ಎದುರಿಸಲು ಭಾರತ ಸನ್ನದ್ಧ

ಭಾರತೀಯ ಸೇನೆ ಬುಧವಾರ ತಡರಾತ್ರಿ ಪಾಕಿಸ್ತಾನ ಉಗ್ರರ ಶಿಬಿರಗಳ ಮೇಲೆ ನಡೆಸಿದ ಸೀಮಿತ ದಾಳಿಗೆ ಪ್ರತಿಯಾಗಿ...
ಜನರನ್ನು ಸ್ಥಳಾಂತರಿಸುತ್ತಿರುವುದು
ಜನರನ್ನು ಸ್ಥಳಾಂತರಿಸುತ್ತಿರುವುದು
Updated on: 
ನವದೆಹಲಿ: ಭಾರತೀಯ ಸೇನೆ ಬುಧವಾರ ತಡರಾತ್ರಿ ಪಾಕಿಸ್ತಾನ ಉಗ್ರರ ಶಿಬಿರಗಳ ಮೇಲೆ ನಡೆಸಿದ ಸೀಮಿತ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಸಂಭವನೀಯ ದಾಳಿಯನ್ನು ಎದುರಿಸಲು ಭಾರತ ಸನ್ನದ್ಧವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಮ್ಮು ಮತ್ತು ಕಾಶ್ಮೀರದ ಹಾಗೂ ಪಂಜಾಬ್ ಗಡಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳನ್ನು ಗುರುವಾರ ತೆರವುಗೊಳಿಸಲಾಗಿದೆ.
ಎಎನ್ಐ ವರದಿ ಪ್ರಕಾರ, ಅತ್ತಾರಿ ಸೆಕ್ಟರ್ ನ ಗ್ರಾಮಗಳನ್ನು ಹಾಗೂ ಪಠಾಣ್ ಕೋಟ್ ನ ಸರ್ಕಾರಿ ಆಸ್ಪತ್ರೆಯ ತುರ್ತು ನಿಗಾಘಟಕ ಸೇರಿದಂತೆ ಇಡೀ ಗ್ರಾಮವನ್ನು ತೆರವುಗೊಳಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಗಡಿಯಿಂದ ಸುಮಾರು 10 ಕಿ.ಮೀ ವ್ಯಾಪ್ತಿಯಲ್ಲಿ ಜನರನ್ನು ತೆರವುಗೊಳಿಸುವಂತೆ  ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಾಕಿಸ್ತಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸೂಚಿಸಿದ್ದರು. ಅಲ್ಲದೆ ಗಡಿಯುದ್ದಕ್ಕೂ ಕಟ್ಟೆಚ್ಚರವಹಿಸುವಂತೆ ಸೇನಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂಡೋ-ಪಾಕ್ ಗಡಿಗೆ ಹೆಚ್ಚುವರಿ ಸೇನಾಪಡೆಗಳು
ಇದೇ ವೇಳೆ ಉಭಯ ದೇಶಗಳ ಗಡಿಯಲ್ಲಿ ಉದ್ವಿಗ್ನ ವಾತಾವರಣ ನೆಲೆಸಿರುವಂತೆಯೇ ಇಂಡೋ-ಪಾಕ್ ಗಡಿಗೆ ಹೆಚ್ಚುವರಿ ಸೇನಾಪಡೆಗಳನ್ನು ನಿಯೋಜಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಪ್ರಮುಖವಾಗಿ ಪಂಜಾಬ್ ಭಾಗದ ಗಡಿಗಳಲ್ಲಿ ಹೆಚ್ಚುವರಿ ಸೇನಾಪಡೆಗಳನ್ನು ನಿಯೋಜಿಸಲಾಗುತ್ತಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಕಟ್ಟೆಚ್ಚರವಹಿಸುವಂತೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com