ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಇಂದು ತಮ್ಮ ವಕೀಲರೊಂದಿಗೆ ತೀವ್ರ ಭದ್ರತೆ ನಡುವೆ ಹಾಜರಾಗಿದ್ದರು. ಸಂಸದರಾಗಿರುವ ರಾಹುಲ್ ಗಾಂಧಿ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದನ್ನು ಪರಿಗಣಿಸಿ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕಾಮ್ರೂಪ್, ವೈಯಕ್ತಿಕ ಮುಚ್ಚಳಿಕೆ ಪತ್ರಕ್ಕೆ ಸಹಿ ಹಾಕಿಸಿಕೊಂಡು ಪ್ರಕರಣದ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿದ್ದಾರೆ.