
ನಾಗಕೊಯಿಲ್: ಕರ್ನಾಟಕ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಕಾವೇರಿ ವಿವಾದವನ್ನು ರಾಜಕೀಯ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಪೊನ್ ರಾಧಾಕೃಷ್ಣನ್ ಅವರು ಹೇಳಿದ್ದಾರೆ.
ಕಾವೇರಿ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಕಳೆದ ನಾಲ್ಕು ವರ್ಷದಿಂದ ಜನಪ್ರಿಯತೆಯನ್ನು ಕಳೆದುಕೊಂಡಿರುವ ಕರ್ನಾಟಕದ ರಾಜ್ಯ ಕಾಂಗ್ರೆಸ್ ಸರ್ಕಾರ, ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ವಿವಾದದಲ್ಲಿ ರಾಜಕೀಯ ಮಾಡುವ ಮೂಲಕ ಜನಪ್ರಿಯತೆಯನ್ನುಗಳಿಸಲು ಯತ್ನಿಸುತ್ತಿದೆ ಎಂದು ರಾಧಾಕೃಷ್ಣನ್ ಅವರು ಆರೋಪಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶಕ್ಕೆ ಅವರು ಗೌರವ ನೀಡುತ್ತಿಲ್ಲ, ಮುಂದಿನ ದಿನಗಳಲ್ಲಿ ಇದರ ಪರಿಣಾಮವನ್ನು ಕರ್ನಾಟಕ ಎದುರಿಸಲಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂಬ ವರದಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಇದೊಂದು ವದಂತಿಯಾಗಿದ್ದು, ಇಂತಹ ಸುದ್ದಿಗಳನ್ನು ಜನರು ನಂಬಬಾರದು ಎಂದು ಹೇಳಿದ್ದಾರೆ.
Advertisement