ಉಗ್ರ ನೆಲೆಗಳ ಮೇಲೆ ಸೇನೆ ಸೀಮಿತ ದಾಳಿ: ಗಡಿ ಭದ್ರತೆ ಪರಿಶೀಲಿಸಿದ ಗೃಹ ಸಚಿವ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿ ಹಿನ್ನೆಲೆ ಭಾರತ ಮತ್ತು ಪಾಕಿಸ್ತಾನದ ಗಡಿಭಾಗದಲ್ಲಿ ನಿಯೋಜಿಸಲಾಗಿರುವ ಭದ್ರತೆಯನ್ನು ಕೇಂದ್ರ ಗೃಹ ಸಚಿವ...

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿ ಹಿನ್ನೆಲೆ ಭಾರತ ಮತ್ತು ಪಾಕಿಸ್ತಾನದ ಗಡಿಭಾಗದಲ್ಲಿ ನಿಯೋಜಿಸಲಾಗಿರುವ ಭದ್ರತೆಯನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಪರಿಶೀಲನೆ ನಡೆಸಿದ್ದಾರೆ.

ಹಿರಿಯ ಅಧಿಕಾರಿಗಳೊಂದಿಗೆ ಇಂದು ರಾಜನಾಥ್ ಸಿಂಗ್ ಅವರು ದೀರ್ಘಕಾಲಿಕ ಸಭೆ ನಡೆಸಿದ್ದು, ಅಧಿಕಾರಿಗಳು ಗಡಿಯಲ್ಲಿ ನಿಯೋಜಿಸಲಾಗಿರುವ ಭದ್ರತೆ ಹಾಗೂ ಮುಂದೆ ತೆಗೆದುಕೊಳ್ಳಬೇಕಾದ ನಿರ್ಧಾರಗಳ ಕುರಿತಂತೆ ಗೃಹ ಸಚಿವರಿಗೆ ವರದಿ ನೀಡಿದ್ದಾರೆಂದು ತಿಳಿದುಬಂದಿದೆ.

ಗಡಿಯಲ್ಲಿ ಸಾಧ್ಯವಾದಷ್ಟು ಭದ್ರತೆಯನ್ನು ಹೆಚ್ಚಿಸುವಂತೆ ರಾಜನಾಥ್ ಸಿಂಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಭಾರತ-ಪಾಕಿಸ್ತಾನ ಗಡಿಯಲ್ಲಿ ಹೈಅಲರ್ಟ್ ಘೋಷಿಸಿದ್ದಾರೆ.

ಗಡಿಯಲ್ಲಿ ನೆಲೆಸಿರುವ ಜನರನ್ನು ಈಗಾಗಲೇ ಸ್ಥಳಾಂತರಿಸಲಾಗುತ್ತಿದ್ದು, ಸ್ಥಳಾಂತರಕ್ಕೆ ಸಹಾಯವಾಗಲು ಮತ್ತಷ್ಟು ಮಾನವ ಶಕ್ತಿ ನೀಡುವಂತೆ ಸಭೆಯಲ್ಲಿ ರಾಜನಾಥ್ ಸಿಂಗ್ ಅವರ ಬಳಿ ಬಿಎಸ್ಎಫ್ ಮನವಿ ಮಾಡಿದೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com