ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರಡಾ ಪಡೆಯ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಆದರೆ ಯಾವುದೇ ಸಾವು-ನೋವು ಸಂಭವಿಸಿಲ್ಲ ಎದು ಪೊಲೀಸರು ತಿಳಿಸಿದ್ದಾರೆ.
ಇಂದು ಸಂಜೆ 5 ಗಂಟೆಯ ಸುಮಾರಿಗೆ ಯರಿಪೋರ ಪ್ರದೇಶದ ಬೆಹಿಬಾಘ್ ನಲ್ಲಿ ಪೊಲೀಸ್ ಮತ್ತು ಸಿಆರ್ ಪಿಎಫ್ ನ ಜಂಟಿ ಕಾವಲು ಪಡೆಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಭದ್ರತಾ ಪಡೆಗಳು ಸಹ ಉಗ್ರರ ವಿರುದ್ಧ ಪ್ರತಿದಾಳಿ ನಡೆಸಿದ್ದು, ತಪ್ಪಿಸಿಕೊಂಡಿರುವ ಉಗ್ರರಾಗಿ ಸೇನೆ ಶೋಧ ಕಾರ್ಯಾಚರಣೆ ಆರಂಭಿಸಿದೆ ಎಂದು ಅವರು ತಿಳಿಸಿದ್ದಾರೆ.