ಹರ್ಯಾಣ ಅಪಘಾತ: 9 ಭಕ್ತರು ಸಾವು, 14 ಜನರಿಗೆ ಗಂಭೀರ ಗಾಯ

ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಪಿಕ್ ಅಪ್ ವಾಹನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಭಕ್ತರು ಸಾವನ್ನಪ್ಪಿ 14 ಮಂದಿ ಗಾಯಗೊಂಡಿರುವ ಘಟನೆ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬಿವಾನಿ(ಹರ್ಯಾಣ): ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಪಿಕ್ ಅಪ್ ವಾಹನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಭಕ್ತರು ಸಾವನ್ನಪ್ಪಿ 14 ಮಂದಿ ಗಾಯಗೊಂಡಿರುವ ಘಟನೆ ಹರ್ಯಾಣದ ಸೈನಿವಾಸ್ ಗ್ರಾಮದಲ್ಲಿ ನಡೆದಿದೆ.

ಭಕ್ತರನ್ನು ಕರೆದೊಯ್ಯುತ್ತಿದ್ದ ಪಿಕ್ ಅಪ್ ವಾಹನ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಭಕ್ತರು ಪಂಜಾಬ್ ನವರಾಗಿದ್ದಾರೆ. ರಾಜಸ್ತಾನದ ಗೋಗಮೇದಿಯಿಂದ ವಾಪಸಾಗುವಾಗ ಈ ಅಪಘಾತ ಸಂಭವಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com