ನಮ್ಮ ಹುಡುಗರು ಚೆನ್ನಾಗಿ ಆಡಿದರು; ಪಾಕಿಸ್ತಾನ ಕಾಲೆಳೆದ ಸೆಹ್ವಾಗ್

ಪಾಕ್ ನೆಲದಲ್ಲಿ ನಮ್ಮ ಹುಡುಗರು ಚೆನ್ನಾಗಿ ಆಡಿದ್ದಾರೆ ಎಂದು ಹೇಳುವ ಮೂಲಕ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪಾಕಿಸ್ತಾನದ ಕಾಲೆಳೆದಿದ್ದಾರೆ.
ಭಾರತ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹಾಗೂ ಭಾರತೀಯ ಸೇನೆ (ಸಂಗ್ರಹ ಚಿತ್ರ)
ಭಾರತ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹಾಗೂ ಭಾರತೀಯ ಸೇನೆ (ಸಂಗ್ರಹ ಚಿತ್ರ)

ನವದೆಹಲಿ: ಪಾಕ್ ನೆಲದಲ್ಲಿ ನಮ್ಮ ಹುಡುಗರು ಚೆನ್ನಾಗಿ ಆಡಿದ್ದಾರೆ ಎಂದು ಹೇಳುವ ಮೂಲಕ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪಾಕಿಸ್ತಾನದ ಕಾಲೆಳೆದಿದ್ದಾರೆ.

ಬುಧವಾರ ರಾತ್ರಿ ನಡೆದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿ ಕಾರ್ಯಾಚರಣೆಯನ್ನು ಟ್ವಿಟರ್ ನಲ್ಲಿ ಶ್ಲಾಘಿಸಿರುವ ಸೆಹ್ವಾಗ್, ಭಾರತೀಯ ಸೇನೆಗೆ  ಸೆಲ್ಯೂಟ್ ಎಂದು ಹೇಳಿದ್ದಾರೆ. ಅಂತೆಯೇ ನಮ್ಮ ಹುಡುಗರು ತುಂಬಾ ಚೆನ್ನಾಗಿ ಆಡಿದರು ಎಂದು ಹೇಳುವ ಮೂಲಕ ಪಾಕಿಸ್ತಾನವನ್ನು ಗೇಲಿ ಮಾಡಿದ್ದಾರೆ.

ಬುಧನವಾರ ರಾತ್ರಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ 7 ಉಗ್ರ ಕ್ಯಾಂಪ್ ಗಳ ಮೇಲೆ ದಾಳಿ ಮಾಡಿದ್ದ ಭಾರತೀಯ ಯೋಧರು 38 ಉಗ್ರರ ಸೆದೆಬಡಿದು, ಇದನ್ನು ತಡೆಯಲು ಬಂದ 6 ಪಾಕಿಸ್ತಾನಿ  ಸೈನಿಕರನ್ನು ಕೊಂದು ಹಾಕಿದ್ದರು. ಸೇನೆಯ ಈ ಕಾರ್ಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com