ಚೆನಾನಿ-ನಶ್ರಿಸುರಂಗ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಆಗಮಿಸುತ್ತಿರುವ ವೇಳೆಯಲ್ಲೇ ಕಾಶ್ಮೀರ ಪ್ರತ್ಯೇಕತಾವಾದಿಗಳು ಪ್ರಧಾನಿ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಕೇವಲ ಕೆಲವೇ ಕೆಲವು ಅಂಗಡಿಗಳು, ಪೆಟ್ರೋಲ್ ಬಂಕ್ ಗಳು ತೆರೆದಿದೆ. ಉಳಿದಂತೆ ವಾಹನ ಸಂಚಾರ, ಖಾಸಗಿ ವಾಹನಗಳು ಆಟೋಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕಾಶ್ಮೀರ ಕಣಿವೆಯಾದ್ಯಂತ ಭದ್ರತೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.