ಇವಿಎಂ ಗೋಲ್ ಮಾಲ್ ಆರೋಪ, ದೆಹಲಿ ಚುನಾವಣೆ ಮುಂದೂಡಿಕೆಗೆ ಕೇಜ್ರಿವಾಲ್ ಆಗ್ರಹ

ಚುನಾವಣೆಯಲ್ಲಿ ಇವಿಎಂ ಯಂತ್ರವನ್ನೇ ತಿರುಚಲಾಗುತ್ತಿದೆ ಎಂದು ಮತ್ತೆ ಆರೋಪಿಸಿರುವ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ....
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ನವದೆಹಲಿ: ಚುನಾವಣೆಯಲ್ಲಿ ಇವಿಎಂ ಯಂತ್ರವನ್ನೇ ತಿರುಚಲಾಗುತ್ತಿದೆ ಎಂದು ಮತ್ತೆ ಆರೋಪಿಸಿರುವ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಈಗ ಮತಪತ್ರ ಬಳಕೆಗೆ ಸಮಯ ಬೇಕಿದ್ದರೆ ದೆಹಲಿ ಮಹಾನಗರ ಪಾಲಿಕೆಗಳ ಚುನಾವಣೆಯನ್ನೇ ಮುಂದೂಡುವಂತೆ ಸೋಮವಾರ ಒತ್ತಾಯಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಇವಿಎಂ ಯಂತ್ರ ತಿರುಚಿದ ಬಗ್ಗೆ ಪ್ರಸ್ತಾಪಿಸಿದ ಕೇಜ್ರಿವಾಲ್, ಈ ಯಂತ್ರ ಉತ್ತರ ಪ್ರದೇಶದಿಂದ ಬಂದಿದ್ದು, ಈಗ ಬಿಜೆಪಿ ಭರ್ಜರಿ ಗೆಲುವಿನ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟು ಹಾಕಿದೆ ಎಂದರು.
ಮಧ್ಯಪ್ರದೇಶದಲ್ಲಿ ಏಪ್ರಿಲ್ 9ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಉತ್ತರ ಪ್ರದೇಶದ ಗೋವಿಂದ್ ನಗರದಿಂದ ಇವಿಎಂಗಳನ್ನು ಬಳಸಲಾಗುತ್ತಿದ್ದು, ಇದರ ಹಿಂದಿನ ಉದ್ದೇಶ ಏನು ಎಂಬುದು ಸ್ಪಷ್ಟಪಡಿಸಬೇಕು ಎಂದು ದೆಹಲಿ ಸಿಎಂ ಆಗ್ರಹಿಸಿದ್ದಾರೆ.
ಚುನಾವಣಾ ಆಯೋಗ ತನ್ನ ನಿಯಮಗಳನ್ನು ತಾನೇ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದ ಕೇಜ್ರಿವಾಲ್, ಒಂದು ಚುನಾವಣೆಗೆ ಬಳಿಸಿದ ಇವಿಎಂ ಅನ್ನು 45 ದಿನಗಳವರೆಗೆ ಮತ್ತೊಂದು ಚುನಾವಣೆಗೆ ಬಳಸುವಂತಿಲ್ಲ. ಏಕೆಂದರೆ  ಒಂದು ವೇಳೆ ಯಾರಾದರೂ ಫಲಿತಾಂಶ ಪ್ರಶ್ನಿಸಿದರೆ ಅದನ್ನು ಮತ್ತೆ ಪರಿಶೀಲಿಸಬೇಕಾಗುತ್ತದೆ ಎಂದರು.
ದೆಹಲಿಯ ಮೂರು ಮಹಾನಗರ ಪಾಲಿಕೆಗಳಿಗೆ ಏ.23ರಂದು ಮತದಾನ ನಡೆಯಲಿದೆ. ಆ ಸಂದರ್ಭದಲ್ಲಿ ವಿದ್ಯುನ್ಮಾನ ಮತ ಯಂತ್ರ ಬೇಡ. ಮತ ಪತ್ರಗಳ ಮೂಲಕ ಚುನಾವಣೆ ನಡೆಸಿ ಎಂದು ಕೇಜ್ರಿವಾಲ್ ಮತ್ತೆ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com