ಚೆನ್ನೈನಲ್ಲಿ ಜರ್ಮನ್ ಮಹಿಳೆ ಮೇಲೆ ಗ್ಯಾಂಗ್ ರೇಪ್ ?

ಪ್ರವಾಸಕ್ಕೆಂದು ಚೆನ್ನೈಗೆ ಆಗಮಿಸಿದ್ದ ಜರ್ಮನ್ ಮಹಿಳೆ ಮೇಲೆ ಕೆಲ ಸ್ಥಳೀಯ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಸಾಂಧರ್ಬಿಕ ಚಿತ್ರ
ಸಾಂಧರ್ಬಿಕ ಚಿತ್ರ

ಚೆನ್ನೈ: ಪ್ರವಾಸಕ್ಕೆಂದು ಚೆನ್ನೈಗೆ ಆಗಮಿಸಿದ್ದ ಜರ್ಮನ್ ಮಹಿಳೆ ಮೇಲೆ ಕೆಲ ಸ್ಥಳೀಯ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಚೆನ್ನೈನ ಮಮಲಪ್ಪುರಂ ಬೀಚ್ ನಲ್ಲಿ ಘಟನೆ ನಡೆದಿದ್ದು, ಪ್ರವಾಸಕ್ಕೆಂದು ಬೀಚ್ ಗೆ ಆಗಮಿಸಿದ್ದ 38 ವರ್ಷದ ಮಹಿಳೆಯನ್ನು ಕೆಲ ದುಷ್ಕರ್ಮಿಗಳು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು  ಆರೋಪಿಸಲಾಗಿದೆ. ಈ ಬಗ್ಗೆ ಚೆನ್ನೈ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಹಿಳೆ ನೀಡಿರುವ ದೂರಿನ ಅನ್ವಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದೂರಿನಲ್ಲಿ ಮಹಿಳೆ ಹೇಳಿಕೊಂಡಿರುವಂತೆ ಮಮಲಪ್ಪುರಂ ಬೀಚ್ ನಲ್ಲಿ ಓಡಾಡುತ್ತಿದ್ದ ವೇಳೆ ಅಲ್ಲಿಗೆ ಆಗಮಿಸಿದ ಕೆಲ ದುಷ್ಕರ್ಮಿಗಳು ನನ್ನನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ  ಗೈದರು ಎಂದು ಹೇಳಲಾಗಿದೆ. ಪ್ರಸ್ತುತ ದೂರು ದಾಖಲಿಸಿಕೊಂಡಿರುವ ಪೊಲೀಸರು ಜರ್ಮನ್ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಪ್ರಕರಣ ಸಂಬಂಧ ಮಮಲಪ್ಪುರಂ ಬೀಚ್ ನಲ್ಲಿ ಹಲವು ವ್ಯಕ್ತಿಗಳನ್ನು  ವಿಚಾರಣೆಗೊಳಪಡಿಸಲಾಗಿದೆ.

ತನಿಖೆ ಮುಂದುವರೆಸಿರುವ ಪೊಲೀಸರು ಶಂಕಿತ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com