ಭಾರತ-ಪಾಕ್ ಬಿಕ್ಕಟ್ಟು ನಿವಾರಣೆಗೆ ಅಮೆರಿಕ ಮಧ್ಯಸ್ಥಿಕೆ ಬೇಡ: ಕೇಂದ್ರ

ಭಾರತ-ಪಾಕಿಸ್ತಾನ ನಡುವಿನ ಬಿಕ್ಕಟ್ಟು ನಿವಾರಣೆಗೆ ಅಮೆರಿಕ ಮಧ್ಯಸ್ಥಿಕೆ ಬೇಡ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ...
ಪ್ರಧಾನಿ ಮೋದಿ- ನವಾಜ್ ಷರೀಫ್
ಪ್ರಧಾನಿ ಮೋದಿ- ನವಾಜ್ ಷರೀಫ್
ನವದೆಹಲಿ: ಭಾರತ-ಪಾಕಿಸ್ತಾನ ನಡುವಿನ ಬಿಕ್ಕಟ್ಟು ನಿವಾರಣೆಗೆ ಅಮೆರಿಕ ಮಧ್ಯಸ್ಥಿಕೆ ಬೇಡ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. 
ಭಯೋತ್ಪಾದನೆ ಮತ್ತು ಹಿಂಸಾಚಾರ ಮುಕ್ತ ಪರಿಸರ ಸೃಷ್ಠಿ ಮಾಡುವ ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಒಪ್ಪಂದದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹೀಗಾಗಿ ಅಮೆರಿಕ ಮಧ್ಯಸ್ಥಿಕೆ ವಹಿಸಿದರು ಉಭಯ ದೇಶಗಳ ನಡುವಿನ ಬಿಕ್ಕಟ್ಟು ಬಗೆಹರಿಯುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ವಕ್ತಾರರು ಹೇಳಿದ್ದಾರೆ. 
ಪಾಕಿಸ್ತಾನದಿಂದಾಗಿ ನಮ್ಮ ಪ್ರಾಂತ್ಯದಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾವು ಸಹಜವಾಗಿಯೇ ಪಾಕಿಸ್ತಾನ ವಿರುದ್ಧ ಕ್ರಮಕೈಗೊಳ್ಳಲು ಅಂತಾರಾಷ್ಟ್ರೀಯ ಸಮುದಾಯಗಳು ಮತ್ತು ಸಂಸ್ಥೆಗಳು ಮುಂದಾಗಬೇಕು ಎಂದು ಬಯಸುತ್ತೇವೆ ಎಂದು ವಕ್ತಾರರು ಹೇಳಿದ್ದಾರೆ. 
ಭಾರತ ಮತ್ತು ಪಾಕಿಸ್ತಾನ ನಡುವಿನ ಬಿಕ್ಕಟ್ಟು ಶಮನಕ್ಕೆ ನಾವು ಮಧ್ಯಸ್ಥಿಕೆ ವಹಿಸುವುದಾಗಿ ವಿಶ್ವಸಂಸ್ಥೆಗೆ ಅಮೆರಿಕಾದ ಶಾಶ್ವತ ಪ್ರತಿನಿಧಿಯಾಗಿರುವ ನಿಲ್ಕಿ ಹ್ಯಾಲೆ ಅವರು ಹೇಳಿದ್ದು ಇದಕ್ಕೆ ಪ್ರತಿಕ್ರಿಯಿಸಿರುವ ವಿದೇಶಾಂಗ ಇಲಾಖೆ ಅಮೆರಿಕದ ಮಧ್ಯಸ್ಥಿಕೆಯ ಅಗತ್ಯವಿಲ್ಲ ಎಂದು ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com