ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಭಾರತೀಯ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಸಣ್ಣ ಹಾಗೂ ಸ್ವಯಂಚಾಲಿಕ ಶಸ್ತ್ರಾಸ್ತ್ರಗಳ ಮೂಲಕ ಭಾರತೀಯ ಸೇನೆ ಪಾಕಿಸ್ತಾನ ದಾಳಿ ಮಾಡುತ್ತಿದ್ದು, ಪಾಕಿಸ್ತಾನ ಸೇನಾ ಪಡೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಅಪ್ರಚೋದಿತ ಗುಂಡಿನ ದಾಳಿಕೆ ಓರ್ವ ನಾಗರೀಕ ಸಾವನ್ನಪ್ಪಿದ್ದಾನೆಂದು ಹೇಳಿದ ನಿನ್ನೆಯಷ್ಟೇ ಪಾಕಿಸ್ತಾನ ವಿದೇಶಾಂಗ ಕಚೇರಿ ಭಾರತೀಯ ಉಪ ಹೈ ಕಮಿಷನರ್ ಜೆ.ಪಿ. ಸಿಂಗ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು.