
ಚೆನ್ನೈ: ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ರೈತರ ತೀರ್ಪು ನೀಡಿರುವ ಮದ್ರಾಸ್ ಹೈಕೋರ್ಟ್ ಸಹಕಾರಿ ಬ್ಯಾಂಕ್ ಗಳಲ್ಲಿರುವ ಸಾಲವನ್ನು ಮನ್ನಾ ಮಾಡುವಂತೆ ಮಂಗಳವಾರ ತಮಿಳುನಾಡು ಸರ್ಕಾರಕ್ಕೆ ಸೂಚನೆ ನೀಡಿದೆ.
ಬರ ಪರಿಹಾರಕ್ಕಾಗಿ ಆಗ್ರಹಿಸಿ ಕಳೆದ ಒಂದು ತಿಂಗಳಿನಿಂದಲೂ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮದ್ರಾಸ್ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಸಹಕಾರಿ ಬ್ಯಾಂಕ್ ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡುವಂತೆ ಆದೇಶ ನೀಡಿದೆ. ಈ ಹಿಂದಷ್ಟೇ ತಮಿಳುನಾಡು ಸರ್ಕಾರ 5 ಎಕರೆವರೆಗಿನ ರೈತರ ಕೃಷಿ ಸಾಲವನ್ನು ಮನ್ನಾ ಮಾಡಿತ್ತು.
ಹೈಕೋರ್ಟ್ ತೀರ್ಪಿನ ಹೊರತಾಗಿಯೂ ಅತ್ತ ದೆಹಲಿಯ ಜಂತರ್ ಮಂತರ್ ನಲ್ಲಿ ತಮಿಳುನಾಡು ರೈತರು ತಮ್ಮ ಅರೆ ಬೆತ್ತಲೆ ಪ್ರತಿಭಟನೆಯನ್ನು ಮುಂದುವರೆಸಿದ್ದು, ಕೇಂದ್ರ ಸರ್ಕಾರ ಕೂಡಲೇ 40 ಸಾವಿರ ಕೋಟಿ ಬರ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ. ಅಂತೆಯೇ ಕೂಡಲೇ ಕೇಂದ್ರ ಸರ್ಕಾರ ಸ್ಥಗಿತವಾಗಿರುವ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.
Advertisement