ಲಖನೌ: ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಭಾರತೀಯ ಜನತಾಪಕ್ಷದ ಮುಖಂಡನನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಮೃತ ಬಿಜೆಪಿ ನಾಯಕ ರಾಜ ವಾಲ್ಮೀಕಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಸದಸ್ಯರಾಗಿದ್ದರು.
ಕೆಲಸದ ನಿಮಿತ್ತ ಖತೋಲಿಗೆ ತೆರಳಿದ್ದಾಗ ಗುಂಡಿಟ್ಟು ಹತ್ಯೆ ಮಾಡಲಾಗಿದ್ದು, ತಲೆಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.