ಜಮ್ಮುವಿನ ಪೂಂಚ್ ಸೆಕ್ಟರ್ ಬಳಿ ಪಾಕಿಸ್ತಾನ ಪಡೆ ಭಾರತೀಯ ಸೇನೆ ಮೇಲೆ ಮತ್ತೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ...
ಶ್ರೀನಗರ: ಜಮ್ಮುವಿನ ಪೂಂಚ್ ಸೆಕ್ಟರ್ ಬಳಿ ಪಾಕಿಸ್ತಾನ ಪಡೆ ಭಾರತೀಯ ಸೇನೆ ಮೇಲೆ ಮತ್ತೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ.
ಇಂದು ಬೆಳಿಗ್ಗೆ 9.5ರಿಂದಲೂ ಪಾಕಿಸ್ತಾನ ಸೇನೆ ಆಟೋಮೆಟಿಕ್ ಹಾಗೂ ಸಣ್ಣ ಶಸ್ತ್ರಾಸ್ತ್ರಗಳ ಮೂಲಕ ಭಾರತೀಯ ಸೇನೆ ಮೇಲೆ ದಾಳಿ ನಡೆಸುತ್ತಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಮೆಹ್ತಾ ಅವರು ಹೇಳಿದ್ದಾರೆ.
ಪಾಕಿಸ್ತಾನ ಸೇನಾ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದ್ದು, ಗಡಿಯಲ್ಲಿ ಈಗಲು ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಮೆಹ್ತಾ ತಿಳಿಸಿದ್ದಾರೆ.
ಕಳೆದ ನಾಲ್ಕು ದಿನಗಳಿಂದಲೂ ಪಾಕಿಸ್ತಾನ ಸೇನೆ ಜಮ್ಮವಿನ ರಜೌರಿ ಹಾಗೂ ಪೂಂಚ್ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಲೇ ಬರುತ್ತಿದೆ.