ಕೇಜ್ರಿವಾಲ್ ವೈಯಕ್ತಿಕ ವಿಚಾರಕ್ಕಾಗಿ ಹೋರಾಟ ಮಾಡುತ್ತಿಲ್ಲ; ಮನೀಶ್ ಸಿಸೋಡಿಯಾ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೋಟಿಗಟ್ಟಲೆ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂಬ ವಿರೋಧ ಪಕ್ಷಗಳ ಆರೋಪಗಳನ್ನು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿರಸ್ಕರಿಸಿದ್ದಾರೆ...
ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ
ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ
ನವದೆಹಲಿ; ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೋಟಿಗಟ್ಟಲೆ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂಬ ವಿರೋಧ ಪಕ್ಷಗಳ ಆರೋಪಗಳನ್ನು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿರಸ್ಕರಿಸಿದ್ದಾರೆ. 
ಜೇಟ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಕೇಜ್ರಿವಾಲ್ ವಿರುದ್ಧ ಎದ್ದಿರುವ ರೂ.3.42 ಕೋಟಿ ಕಾನೂನು ಶುಲ್ಕ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಕೇಜ್ರಿವಾಲ್ ಅವರು ತಮ್ಮ ವೈಯಕ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟವನ್ನು ಮಾಡುತ್ತಿಲ್ಲ. ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿ ಮೊಕದ್ದಮೆಯನ್ನು ಎದುರಿಸುತ್ತಿದ್ದಾರೆಂದು ಹೇಳಿದ್ದಾರೆ. 
ಡಿಡಿಸಿಎಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದರೆ, ಅದು ದೇಶದ ಕ್ರಿಕೆಟ್ ಸಂಪ್ರದಾಯದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ದೆಹಲಿ ಸರ್ಕಾರ ಸಮಿತಿಯನ್ನು ರಚಿಸಿ ತನಿಖೆಗೆ ಆದೇಶಿಸಿತ್ತು. ಇದು ಕೇಜ್ರಿವಾಲ್ ಅವರ ವೈಯಕ್ತಿಕ ವಿಚಾರವಲ್ಲ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು, ಇವಿಎಂ ಗೋಲ್ ಮಾಲ್ ಪ್ರಕರಣ ಸಂಬಂಧ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಮಾನನಷ್ಟ ಮೊಕದ್ದಮೆ ಪ್ರಕರಣ ಕಳೆದ ಒಂದೂವರೆ ವರ್ಷದಿಂದಲೂ ನಡೆಯುತ್ತಲೇ ಇದೆ. ಆದರೆ, ಬಿಜೆಪಿಯವರು ಇದೀಗ ಪ್ರಕರಣ ಪ್ರಸ್ತಾಪ ಮಾಡುತ್ತಿದ್ದಾರೆ. ಏಕೆಂದರೆ ಇವಿಎಂ ಗೋಲ್ ಮಾಲ್ ಪ್ರಕರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಲುವಾಗಿ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com