ಪಾಟ್ನಾ: ಗ್ರಾಮೀಣ ಪ್ರದೇಶಗಳಲ್ಲಿ ಅತ್ಯುತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುವುದಕ್ಕೆ ಸಾಧ್ಯವಾಗುವಂತೆ ಡ್ರೋಣ್ ಗಳ ಬಳಕೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಸಕ್ತಿ ತೋರಿದ್ದಾರೆ.
ಪ್ರಧಾನಮಂತ್ರಿ ಗ್ರಾಮ್ ಸಡಕ್ ಯೋಜನೆ ಹಾಗೂ ಮುಖ್ಯಮಂತ್ರಿ ಗ್ರಾಮೀಣ್ ಸಡಕ್ ಯೋಜನೆ ಸೇರಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ್ದ ವೇಳೆ ನಿತೀಶ್ ಕುಮಾರ್ ಡ್ರೋಣ್ ಗಳ ಬಳಕೆಗೆ ಆಸಕ್ತಿ ತೋರಿದ್ದಾರೆ ಎಂದು ಸರ್ಕಾರದ ಅಧಿಕೃತ ಹೇಳಿಕೆಯ ಮೂಲಕ ತಿಳಿದುಬಂದಿದೆ.
ಜನಸಂಖ್ಯೆ ಆಧಾರದಲ್ಲಿ ಗ್ರಾಮಗಳನ್ನು ವಿಭಾಗಿಸಬೇಕು, ರಸ್ತೆ ನಿರ್ಮಾಣಕ್ಕೆ ಟೆಂಡರ್ ನೀಡುವಾಗ ಮೀಸಲಾತಿಯ ನೀತಿಗಳನ್ನು ಗಮನದಲ್ಲಿಟ್ಟುಕೊಳ್ಳಬೇಕೆಂದು ಅಧಿಕಾರಿಗಳಿಗೆ ನಿತೀಶ್ ಕುಮಾರ್ ಹೇಳಿದ್ದಾರೆ.