ಶಾಲೆ-ಕಾಲೇಜು, ಧಾರ್ಮಿಕ ಕ್ಷೇತ್ರಗಳ ಸುತ್ತಮುತ್ತ ಮದ್ಯದಂಗಡಿ ಬಂದ್'ಗೆ ಯೋಗಿ ಸೂಚನೆ

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿಣ ಕೈಗೊಂಡಿದ್ದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಇದೀಗ ಮದ್ಯದಂಗಡಿಗಳ ಕುರಿತಂತೆ ಸುಪ್ರೀಂಕೋರ್ಟ್ ಹೊರಡಿಸಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮುಂದಾಗಿದ್ದಾರೆ...
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಲಖನೌ: ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿಣ ಕೈಗೊಂಡಿದ್ದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಇದೀಗ ಮದ್ಯದಂಗಡಿಗಳ ಕುರಿತಂತೆ ಸುಪ್ರೀಂಕೋರ್ಟ್ ಹೊರಡಿಸಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮುಂದಾಗಿದ್ದಾರೆ. 
ಸುಪ್ರೀಂಕೋರ್ಟ್ ಆದೇಶದಂತೆಯೇ ಶಾಲೆ, ಕಾಲೇಜುಗಳು ಹಾಗೂ ಧಾರ್ಮಿಕ ಕ್ಷೇತ್ರಗಳ ಹತ್ತಿರದಲ್ಲಿರುವ ಮದ್ಯದ ಅಂಗಡಿಗಳನ್ನು ಬಂದ್ ಮಾಡಿಸುವಂತೆ ಅಧಿಕಾರಿಗಳಿಗೆ ಯೋಗಿ ಆದಿತ್ಯನಾಥ್ ಅವರು ಸೂಚನೆ ನೀಡಿದ್ದಾರೆ. 
ಸಾರ್ವಜನಿಕ ಪ್ರದೇಶಗಳ ಬಳಿಯಿರುವ ಮದ್ಯದ ಅಂಗಡಿಗಳನ್ನು ಬಂದ್ ಮಾಡಿಸುವಂತೆ ಕೋರಿ ಈ ಹಿಂದೆ ಹಲವು ಮಹಿಳಾ ಸಂಘಟನೆಗಳು ಉತ್ತರಪ್ರದೇಶದಲ್ಲಿ ಪ್ರತಿಭಟನೆಗಳನ್ನು ನಡೆಸಿದ್ದರು. ಈ ಹಿನ್ನಲೆಯಲ್ಲಿ ಸುಪ್ರೀಂ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
ಆದೇಶ ಕುರಿತಂತೆ ಉತ್ತರಪ್ರದೇಶ ರಾಜ್ಯ ಮುಖ್ಯ ಕಾರ್ಯದರ್ಶಿ ರಾಹುಲ್ ಭಟ್ನಗರ್ ಅವರು ಮಾತನಾಡಿದ್ದು, ರಾಜ್ಯದಲ್ಲಿ ಸಾಕಷ್ಟು ಮದ್ಯದಂಗಡಿಗಳ ಮೇಲೆ ದಾಳಿ ನಡೆಸಿದ್ದು, ಕಳ್ಳತನದಂತಹ ಘಟನೆಗಳು ನಡೆದಿವೆ. ಹೀಗಾಗಿ ಇಂತಹ ಘಟನೆಗಳು ಮರುಕಳಿದಂತೆ ಎಚ್ಚರಿಕೆ ವಹಿಸುವಂತೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಅಬಕಾರಿ ಅಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕ ಪ್ರದೇಶಗಳಲ್ಲಿರುವ ಹಲವು ಮದ್ಯದಂಗಡಿಗಳನ್ನು ಈಗಾಗಲೇ ಸ್ಥಳಾಂತರಿಸುವ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. 
ಶಾಲೆಗಳು, ಕಾಲೇಜುಗಳು ಹಾಗೂ ಧಾರ್ಮಿಕ ಪ್ರದೇಶಗಳ ಬಳಿಯಿರುವ ಮದ್ಯದ ಅಂಗಡಿಗಳ ಸ್ಥಳಾಂತರ ಕುರಿತಂತೆ ಕಠಿಣ ಸೂಚನೆಯನ್ನು ನೀಡಲಾಗಿದ್ದು, ಈ ಕುರಿತಂತೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಅಬಕಾರಿ ಅಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರು ಜಂಟಿಯಾಗಿ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ. 
ಅಂಗಡಿಗಳ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಜನರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದ್ದು, ಕಾನೂನಿನ ಆದೇಶವನ್ನು ಪಾನೆ ಮಾಡಲಾಗುತ್ತಿದೆ ಎಂದು ಮನವಿ ಮಾಡಿಕೊಳ್ಳಲಾಗಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಮನವಿ ಮಾಡಲಾಗಿದೆ. ಕಾನೂನನ್ನು ಕೈಗೆತ್ತಿಕೊಂಡವರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com