ಯೋಗಿ ಹಾದಿಯಲ್ಲಿ ಪಂಜಾಬ್ ಸಿಎಂ: ರೈತರ ಸಾಲ ಮನ್ನಾ ಮಾಡಲು ಮುಂದಾದ ಅಮರಿಂದರ್ ಸಿಂಗ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆ ರಾಜ್ಯದ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ, ಇದೀಗ ಪಂಜಾಬ್ ಸಿಎಂ ಕ್ಯಾಪ್ಟನ್ ...
ಅಮರಿಂದರ್ ಸಿಂಗ್
ಅಮರಿಂದರ್ ಸಿಂಗ್
ಚಂಡಿಘಡ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆ ರಾಜ್ಯದ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ, ಇದೀಗ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್‌ ಸಿಂಗ್ ಕೂಡ ತಮ್ಮ ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡುವ ನಿರ್ಧಾರಕ್ಕೆ ಮುಂದಾಗಿದ್ದಾರೆ.
ರೈತರ ಸಾಲ ಮನ್ನಾ ಮಾಡುವ ನಿರ್ಧಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, ಕೇಂದ್ರ ಸರ್ಕಾರದ ನೆರವು ನೀಡಲಿ, ನೀಡದಿರಲಿ, ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಕ್ಯಾ. ಅಮರೀಂದರ್ ಸಿಂಗ್ ತಿಳಿಸಿದ್ದಾರೆ. 
ಝಿರಾಕ್ ಪುರದಲ್ಲಿ ಡಿಮಾರ್ಟ್ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು ಸಾಲಮನ್ನಾಕ್ಕಾಗಿ ಕೇಂದ್ರಕ್ಕೆ ಮನವಿ ಮಾಡುತ್ತೇನೆ, ಒಂದು ವೇಳೆ ಕೇಂದ್ರ ಸರ್ಕಾರ ಬೆಂಬಲ ನೀಡದಿದ್ದಲ್ಲಿ ರಾಜ್ಯ ಸರ್ಕಾರವೇ ರೈತರ ಸಾಲಮನ್ನಾ ಮಾಡಲಿದೆ ಎಂದು ತಿಳಿಸಿದ್ದಾರೆ.
ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲ ಭರವಸೆ ಈಡೇರಿಸಲು ಕಾಂಗ್ರೆಸ್‌ ಸರ್ಕಾರ ಬದ್ಧವಾಗಿದೆ.  ಡ್ರಗ್‌ ದಂಧೆ ಮಟ್ಟ ಹಾಕಲು ಹಿರಿಯ ಪೊಲೀಸ್ ಅಧಿಕಾರಿ ಹರ್‌ಪ್ರೀತ್ ಸಿಂಗ್ ಸಿಧು ನೇತೃತ್ವದಲ್ಲಿ ತಂಡ ಸಹ ರಚನೆ ಮಾಡಲಾಗಿದೆ ಎಂದು ಸಿಎಂ ಅಮರೀಂದರ್  ತಿಳಿಸಿದ್ದಾರೆ.
ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿರುವ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಅವಶ್ಯಕವಾಗಿರುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಎಲ್ಲಾ ಆರ್ಥಿಕ ಯೋಜನೆಗಳ ಸಂಬಂಧ ಶ್ವೇತಪತ್ರ ಹೊರಡಿಸುವುದಾಗಿ ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com