ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಕಾಶ್ಮೀರದ ನೌಶೆರಾದಲ್ಲಿ ಗುಂಡಿನ ದಾಳಿ

ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಶನಿವಾರ ಜಮ್ಮು ಮತ್ತು ಕಾಶ್ಮೀರದ ನೌಶೆರಾದಲ್ಲಿ ಭಾರತೀಯ ಪೋಸ್ಟ್ ಗಳ ಮೇಲೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಶನಿವಾರ ಜಮ್ಮು ಮತ್ತು ಕಾಶ್ಮೀರದ ನೌಶೆರಾದಲ್ಲಿ ಭಾರತೀಯ ಪೋಸ್ಟ್ ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನೆ ತಿಳಿಸಿದೆ.
ಗಡಿ ನಿಯಂತ್ರಣ ರೇಖೆಯ ನೌಶೆರಾ ಸೆಕ್ಟರ್ ನ ಜಾಂಗರ್ ಪ್ರದೇಶದಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿಗೆ ಪಾಕ್ ಸೇನೆ ಸಣ್ಣ ಶಸ್ತ್ರಾಸ್ತ್ರಗಳು, ಆಟೋಮೆಟಿಕ್ ವೆಪನ್ಸ್ ಮತ್ತು ಶೆಲ್ ದಾಳಿ ನಡೆಸಿದ್ದು, ಭಾರತ ಸಹ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ರಕ್ಷಣಾ ವಕ್ತಾರರು ಹೇಳಿದ್ದಾರೆ.
ಈ ಪ್ರದೇಶದಲ್ಲಿ ಪಾಕಿಸ್ತಾನ ಐದನೇ ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಕಳೆದ ಸೋಮವಾರ ಮತ್ತು ಬುಧವಾರ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com