ಬುಕ್ಸಾರ್: ಪಾಟ್ನಾ-ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ದರೋಡೆಕೋರರು ಪ್ರಯಾಣಿಕರನ್ನು ಥಳಿಸಿ, ಅವರ ಬಳಿಯಿದ್ದ ಮೌಲ್ಯಯುತ ವಸ್ತುಗಳನ್ನು ದೋಚಿ ಪರಾರಿಯಾಗಿರುವ ಆಘಾತಕಾರಿ ಘಟನೆ ಬಿಹಾರದ ಬಕ್ಸಾರ್ ಬಳಿ ನಡೆದಿದೆ.
ರೈಲಿನಲ್ಲಿದ್ದ ಪ್ರಯಾಣಿಕರ ಬಳಿ ಇದ್ದ ಮೌಲ್ಯಯುತ ವಸ್ತುಗಳನ್ನು ಕದ್ದಿದ್ದಲ್ಲದೇ ಸ್ಥಳದಿಂದ ಪರಾರಿಯಾಗುವ ಮುನ್ನ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಡಕಾಯಿತರ ಹಲ್ಲೆಯಿಂದ ಮೂವರು ಪ್ರಯಾಣಿಕರು ಗಾಯಗೊಂಡಿದ್ದು, ದೂರು ದಾಖಲಿಸಿದ್ದಾರೆ.
ಘಟನೆ ಸಂಬಂಧ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಕರ್ತವ್ಯದ ವೇಳೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ರೈಲು ಬೆಂಗಾವಲು ಪಡೆಯ ಆರ್‌ಪಿಎಫ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
ಪ್ರಕರಣ ಸಂಬಂಧ ಎಫ್ ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.