ಕಾಶ್ಮೀರದಲ್ಲಿ ಹಿಂಸಾಚಾರ ಹಿನ್ನಲೆ: ಅನಂತ್ ನಾಗ್ ಲೋಕಸಭಾ ಉಪ ಚುನವಾಣೆ ಮೇ 25ಕ್ಕೆ ಮುಂದೂಡಿಕೆ!

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿರುವುದರಿಂದ ಇದೇ ಏಪ್ರಿಲ್ 12ರಂದು ನಡೆಯಬೇಕಿದ್ದ ಅನಂತ್ ನಾಗ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಮೇ 25 ಮುಂದೂಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿರುವುದರಿಂದ ಇದೇ ಏಪ್ರಿಲ್ 12ರಂದು ನಡೆಯಬೇಕಿದ್ದ ಅನಂತ್ ನಾಗ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಮೇ 25 ಮುಂದೂಡಲಾಗಿದೆ.

ಚುನಾವಣೆಯನ್ನು ವಿರೋಧಿಸಿ ಮತ್ತು ಇತ್ತೀಚೆಗೆ ಕಾಶ್ಮೀರದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಶ್ಮೀರದ ಪ್ರತ್ಯೇಕತಾವಾದಿಗಳು ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಸೃಷ್ಟಿಸುತ್ತಿದ್ದು.  ಅಮಾಯಕ ಯುವಕರನ್ನು ತಮ್ಮ ರಾಜಕೀಯದಾಟಕ್ಕೆ ಬಳಕೆ ಮಾಡಿಕೊಂಡು ಹಿಂಸಾಚಾರ ಸೃಷ್ಟಿಸುತ್ತಿದ್ದಾರೆ. ಏತನ್ಮಧ್ಯೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಆತಂಕ ವ್ಯಕ್ತಪಡಿಸಿದ  ಹಿನ್ನಲೆಯಲ್ಲಿ ಅನಂತ್ ನಾಗ್ ಜಿಲ್ಲೆಯಲ್ಲಿ ಇದೇ ಏಪ್ರಿಲ್ 12ರಂದು ನಡೆಯಬೇಕಿದ್ದ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಮೇ 25ಕ್ಕೆ ಮುಂದೂಡಿದೆ.

ಮೇ 25ರ ಹೊತ್ತಿಗೆ ಕಾಶ್ಮೀರದ ಪ್ರಸ್ತುತ ಹಿಂಸಾಚಾರ ತಹಬದಿಗೆ ಬಂದು ಮುಕ್ತ ಮತ್ತು ಸ್ವತಂತ್ರ ಮತದಾನ ನಡೆಯುವ ಕುರಿತು ಚುನಾವಣಾ ಆಯೋಗ ವಿಶ್ವಾಸ ವ್ಯಕ್ತಪಡಿಸಿದೆ. ಭಾನುವಾರ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ  ಹಿಂಸಾಚಾರ ಪ್ರಕರಣದ ಬಳಿಕ ಚುನಾವಣಾ ಆಯೋಗ ಈ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ.

ಹಿಂಸಾಚಾರ ಪೀಡಿತ ಕುಲ್ಗಾಮ್, ಪುಲ್ವಾಮ ಶೋಪಿಯಾನ್ ಮತ್ತು ಅನಂತ್ ನಾಗ್ ಜಿಲ್ಲೆಗಳು ಅನಂತ್ ನಾಗ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com