ವಿದ್ಯುನ್ಮಾನ ಮತ ಯಂತ್ರ ವಿವಾದ: ರಾಷ್ಟ್ರಪತಿ ಮೊರೆ ಹೋಗಲು ಕಾಂಗ್ರೆಸ್ ನಿರ್ಧಾರ

ವಿದ್ಯುನ್ಮಾನ ಮತ ಯಂತ್ರಗಳ ವಿವಾದದಲ್ಲಿ ಮಧ್ಯ ಪ್ರವೇಶಕ್ಕೆ ವಿರೋಧ ಪಕ್ಷ ಕಾಂಗ್ರೆಸ್ ರಾಷ್ಟ್ರಪತಿ ಪ್ರಣಬ್ ....
ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ನವದೆಹಲಿ:ವಿದ್ಯುನ್ಮಾನ ಮತ ಯಂತ್ರಗಳ ವಿವಾದದಲ್ಲಿ ಮಧ್ಯ ಪ್ರವೇಶಕ್ಕೆ ವಿರೋಧ ಪಕ್ಷ ಕಾಂಗ್ರೆಸ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಮೊರೆ ಹೋಗಲು ನಿರ್ಧರಿಸಿದೆ.
ವಿದ್ಯುನ್ಮಾನ ಮತಯಂತ್ರಗಳನ್ನು ವಿರೂಪಗೊಳಿಸಲಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಇತ್ತೀಚೆಗೆ ನಡೆದ 5 ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಆರೋಪಿಸಿದ್ದಕ್ಕೆ ಚುನಾವಣಾ ಆಯೋಗ ಆರೋಪವನ್ನು ತಳ್ಳಿಹಾಕಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ವಿವಾದವನ್ನು ಬಗೆಹರಿಸುವಂತೆ ಕಾಂಗ್ರೆಸ್ ರಾಷ್ಟ್ರಪತಿಯವರ ಮೊರೆ ಹೋಗಲು ನಿರ್ಧರಿಸಿದೆ.
ವಿದ್ಯುನ್ಮಾನ ಮತ ಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ಗಳನ್ನು ಬಳಸವಂತೆ ಅದು ಸಲಹೆ ನೀಡಿದೆ. ತಮಗೆ ಭಾರತೀಯ ಚುನಾವಣಾ ಆಯೋಗದ ಮೇಲೆ ನಂಬಿಕೆಯಿದೆ ಹೊರತು ವಿದ್ಯುನ್ಮಾನ ಮತಯಂತ್ರಗಳ ಮೇಲೆ ಅಲ್ಲ ಎಂದು ಅದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com