ಜಾಧವ್ ಗೆ ಗಲ್ಲು ಶಿಕ್ಷೆ ಜಾರಿಗೊಳಿಸಿದರೆ ದ್ವಿಪಕ್ಷೀಯ ಸಂಬಂಧಗಳ ಮೇಲೆ ಪರಿಣಾಮ: ಪಾಕ್ ಗೆ ಸುಷ್ಮಾ ಎಚ್ಚರಿಕೆ

ಪಾಕಿಸ್ತಾನ ಸೇನಾ ಕೋರ್ಟ್ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿರುವುದನ್ನು ...
ರಾಜ್ಯಸಭೆಯಲ್ಲಿ ಸುಷ್ಮಾ ಸ್ವರಾಜ್
ರಾಜ್ಯಸಭೆಯಲ್ಲಿ ಸುಷ್ಮಾ ಸ್ವರಾಜ್
Updated on: 
ನವದೆಹಲಿ: ಪಾಕಿಸ್ತಾನ ಸೇನಾ ಕೋರ್ಟ್ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿರುವುದನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಇದೊಂದು ಪೂರ್ವ ಯೋಜಿತ ಕೊಲೆ ಎಂದಿದೆ. ಅಲ್ಲದೆ ಜಾಧವ್ ಗಲ್ಲು ಶಿಕ್ಷೆ ಜಾರಿಗೊಳಿಸಿದರೆ ದ್ವಿಪಕ್ಷೀಯ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಇಸ್ಲಾಮಾಬಾದ್ ಅರಿತುಕೊಳ್ಳಬೇಕು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.
ಇಂದು ರಾಜ್ಯಸಭೆಯಲ್ಲಿ ಜಾಧವ್ ಗಲ್ಲು ಶಿಕ್ಷೆ ಕುರಿತು ಪ್ರತಿಕ್ರಿಯೆ ನೀಡಿದ ವಿದೇಶಾಂಗ ಸಚಿವೆ, ಜಾಧವ್ ಅವರು ತಪ್ಪು ಮಾಡಿರುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ. ಜಾಧವ್ ವಿರುದ್ಧ ಹೊರಿಸಿರುವ ಆರೋಪ ನಿರಾಧಾರವಾದದ್ದು.  ಒಂದು ವೇಳೆ ಉದ್ದೇಶ ಪೂರ್ವಕವಾಗಿ ಆತನನ್ನು ಬಲಿಪಶವನ್ನಾಗಿ ಮಾಡಿದರೆ ಭಾರತ ಈ ವಿಚಾರವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲಾಗುವದು ಎಂದು ಹೇಳಿದ್ದಾರೆ.
ಇದೊಂದು ಪೂರ್ವಯೋಜಿತ ಕೊಲೆ ಎಂದಿರುವ ಸುಷ್ಮಾ ಸ್ವರಾಜ್, ಜಾಧವ್ ಗೆ ಗಲ್ಲು ಶಿಕ್ಷೆಯನ್ನು ಜಾರಿಗೊಳಿಸಿದರೆ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕುಲಭೂಷಣ್ ಜಾಧವ್ ಅವರು ಭಾರತದ ಪುತ್ರನಾಗಿದ್ದು, ನಾವು ಆತನನ್ನು ರಕ್ಷಿಸಲು ಬೇರೆ ದಾರಿಯನ್ನೇ ನೋಡಿಕೊಳ್ಳುತ್ತೇವೆ. ಈ ಸಂಬಂಧ ಭಾರತ ಸರ್ಕಾರ ಪಾಕಿಸ್ತಾನ ಸುಪ್ರೀಂ ಕೋರ್ಟ್ ಹಾಗೂ ಪಾಕ್ ಅಧ್ಯಕ್ಷರ ಮೊರೆ ಹೊಗಲಿದೆ. ಒಟ್ಟಿನಲ್ಲಿ ಕೂಲಭೂಷಣ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಬೇಕಾದ ಎಲ್ಲಾ ರೀತಿಯ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಸಷ್ಮಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com