ನೋಯ್ಡಾ: ಉತ್ತರ ಪ್ರದೇಶದಲ್ಲಿ ಮಹಿಳೆಯರ ಗುಂಪು ಮದ್ಯದ ಅಂಗಡಿಗೆ ಬೆಂಕಿ ಹಚ್ಚಿದ್ದು, ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಮಹಿಳೆಯರ ಗುಂಪು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದರು. ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದ ಪೊಲೀಸರ ಕ್ರಮವನ್ನು ಖಂಡಿಸಿರುವ ಮಹಿಳೆಯರು ಪೊಲೀಸರಿಗೆ ಘೇರಾವ್ ಹಾಕಿದ ಘಟನೆಯೂ ನಡೆದಿದೆ.
ಬಂಧನಕ್ಕೊಳಗಾಗಿದ್ದ ಮಹಿಳೆಯರನ್ನು ಕೆಲವು ಸಮಯದ ನಂತರ ಪೊಲೀಸರು ಬಿಡುಗಡೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.