ಸಂಪೂರ್ಣವಾಗಿ ಗೋಹತ್ಯೆ ನಿಷೇಧಿಸಿ: ಎಎಂಯು ವಿದ್ಯಾರ್ಥಿಗಳಿಂದ ಮೋದಿ ಸರ್ಕಾರಕ್ಕೆ ಬೆಂಬಲ

ವಿವಾದಿತ ಗೋಹತ್ಯೆ ವಿಷಯ ಸಂಬಂಧ ಮಹತ್ವದ ಬೆಳವಣಿಗೆಯೊಂದು ಜರುಗಿದೆ. ಅಲಿಘಡ ಮುಸ್ಲಿಂ ವಿವಿ ವಿದ್ಯಾರ್ಥಿಗಳು ದೇಶದಲ್ಲಿ ಸಂಪೂರ್ಣವಾಗಿ ಗೋಹತ್ಯೆ ...
ಅಲಿಘಡ ಮುಸ್ಲಿಂ ವಿವಿ
ಅಲಿಘಡ ಮುಸ್ಲಿಂ ವಿವಿ
ಅಲಿಘಡ್: ವಿವಾದಿತ ಗೋಹತ್ಯೆ ವಿಷಯ ಸಂಬಂಧ ಮಹತ್ವದ ಬೆಳವಣಿಗೆಯೊಂದು ಜರುಗಿದೆ. ಅಲಿಘಡ ಮುಸ್ಲಿಂ ವಿವಿ ವಿದ್ಯಾರ್ಥಿಗಳು ದೇಶದಲ್ಲಿ ಸಂಪೂರ್ಣವಾಗಿ ಗೋಹತ್ಯೆ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಎಎಂಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಫೈಜುಲ್ ಹಸನ್, ನಾವು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸುತ್ತೇವೆ, ಹಿಂದೂಗಳ ಭಾವನೆಗೆ ವಿರೋಧವಾಗಿರುವ ಇಂಥ ಗೋಹತ್ಯೆಯನ್ನು ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದಲ್ಲಿ ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಗೋಹತ್ಯೆ ನಿಷೇಧಿಸುವುದರ ಜೊತೆಗೆ ಸಂಪೂರ್ಣವಾಗಿ ಆಮದು ಮತ್ತು ರಪ್ತು ಮಾಡುವುದನ್ನು ನಿಲ್ಲಿಸಬೇಕು. ದೇಶದಲ್ಲಿ ಅನಾವಶ್ಯಕವಾಗಿ ವಿವಿಧ ಸಮುದಾಯಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡುತ್ತಿರುವ ಕೋಣದ ಮಾಂಸ ಮಾರಾಟ ಕೂಡ ನಿಲ್ಲಿಸಬೇಕೆಂದು ಅವರು ಆಗ್ರಹಿಸಿದ್ದಾರೆ. 
ಗೋಸಾಗಣೆ, ಎಮ್ಮೆ ಸಾಗಣೆಗಳಿಂದ ಕೋಮು ಸಂಘರ್ಷಗಳು ಹೆಚ್ಚುತ್ತಿವೆ, ಗೋರಕ್ಷಕರೆಂದು ಹೇಳಿಕೊಳ್ಳುವವರು ಕಾನೂನನ್ನು ತಮ್ಮ ಕೈಗೆತ್ತಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com