ಮುಖ್ಯಮಂತ್ರಿ ಸಿದ್ದರಾಮಯ್ಯ
ದೇಶ
ಕಪ್ಪತಗುಡ್ಡ ಇನ್ನು ಸಂರಕ್ಷಿತ ಅರಣ್ಯ ಪ್ರದೇಶ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
ಸಾರ್ವಜನಿಕರ ತೀವ್ರ ವಿರೋಧ ಹಾಗೂ ಹೋರಾಟಕ್ಕೆ ಕೊನೆಗೆು ಮಣಿದಿರುವ ರಾಜ್ಯ ಸರ್ಕಾರ ಕಪ್ಪತ್ತಗುಡ್ಡವನ್ನು ಮತ್ತೆ ಸಂರಕ್ಷಿತ ಮೀಸಲು ಅರಣ್ಯ ಪ್ರದೇಶ ಎಂದು ಘೋಷಣೆ ಮಾಡಿದೆ...
ಬೆಂಗಳೂರು: ಸಾರ್ವಜನಿಕರ ತೀವ್ರ ವಿರೋಧ ಹಾಗೂ ಹೋರಾಟಕ್ಕೆ ಕೊನೆಗೆು ಮಣಿದಿರುವ ರಾಜ್ಯ ಸರ್ಕಾರ ಕಪ್ಪತ್ತಗುಡ್ಡವನ್ನು ಮತ್ತೆ ಸಂರಕ್ಷಿತ ಮೀಸಲು ಅರಣ್ಯ ಪ್ರದೇಶ ಎಂದು ಘೋಷಣೆ ಮಾಡಿದೆ.
ಈ ಮಾಧ್ಯಮಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಪ್ಪತ್ತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಲು ನಾನು ಸಮ್ಮತಿ ನೀಡಿದ್ದೇನೆ. ವನ್ಯಜೀವಿ ಮಂಡಳಿಯ ಮುಂದಿನ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿ, ಅಂತಿಮ ತೀರ್ಮಾನ ಹೊರಬೀಳಲಿದೆ ಎಂದು ಹೇಳಿದ್ದಾರೆ.
ನವೆಂಬರ್ 4 ರಂದು ಕಪ್ಪುತ್ತಗುಡ್ಡಕ್ಕೆ ನೀಡಲಾಗಿದ್ದ ಸಂರಕ್ಷಿತ ಮೀಸಲು ಅರಣ್ಯ ಪ್ರದೇಶ ಸ್ಥಾನಮಾನವನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿತ್ತು. ಕಪ್ಪತ್ತಗುಡ್ಡ ಉತ್ತರ ಕರ್ನಾಟಕ ಜನತೆಯ ಜೀನವಾಡಿಯಾಗಿದ್ದು, ಕೇವಲ ಗದಗ ಮಾತ್ರವಲ್ಲದೆ, ಎಲ್ಲಾ ಜಿಲ್ಲೆಗಳ ಜನತೆಯಲ್ಲಿ ಕಪ್ಪತ್ತಗುಡ್ಡದಲ್ಲಿನ ಅಮೂಲ್ಯ ಔಷಧಿ ಸಸ್ಯಗಳು ಉಳಿಯಬೇಕು. ಅವು ಉಳಿಯಬೇಕಾದಲ್ಲಿ ಕಪ್ಪತ್ತಗುಡ್ಡ ಉಳಿಯಬೇಕೆಂದು ಗದಗ ಸೇರಿದಂತೆ ರಾಜ್ಯಾದ್ಯಂತ ಜನತೆ ಹಲವಾರು ಹೋರಾಟಗಳನ್ನು ನಡೆಸಿತ್ತು. ಜನತೆಯ ಹೋರಾಟಕ್ಕೆ ಕೊನೆಗೂ ಮಣಿದಿರುವ ಸರ್ಕಾರ ಕಪ್ಪತ್ತಗುಡ್ಡಕ್ಕೆ ಮತ್ತೆ ಸಂರಕ್ಷಿತ ಮೀಸಲು ಅರಣ್ಯ ಪ್ರದೇಶ ಸ್ಥಾನಮಾನ ನೀಡಲು ತೀರ್ಮಾನ ಕೈಗೊಂಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ