ಪಕ್ಷದ ಸೋಲಿಗೆ ಇವಿಎಂ ಯಂತ್ರ ಹೊಣೆ ಮಾಡುವುದು ಸರಿಯಲ್ಲ: ಕಾಂಗ್ರೆಸ್ ವಿರುದ್ಧ ಮೊಯ್ಲಿ ವಾಗ್ದಾಳಿ

ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ಸರಿಯಲ್ಲ ಎಂದು ನೀಡಿರುವ ದೂರಿಗೆ ಕಾಂಗ್ರೆಸ್‍ನಲ್ಲೇ ಅಸಮಾಧಾನ ಭುಗಿಲೆದ್ದಿದೆ. ಇವಿಎಂ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ...
ವೀರಪ್ಪ ಮೊಯ್ಲಿ
ವೀರಪ್ಪ ಮೊಯ್ಲಿ
Updated on: 
ನವದೆಹಲಿ: ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್  ಸರಿಯಲ್ಲ ಎಂದು ನೀಡಿರುವ ದೂರಿಗೆ ಕಾಂಗ್ರೆಸ್‍ನಲ್ಲೇ ಅಸಮಾಧಾನ ಭುಗಿಲೆದ್ದಿದೆ. ಇವಿಎಂ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ದೂರು ನೀಡಿದ್ದಕ್ಕೆ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಇವಿಎಂನಲ್ಲಿ ಯಾರಿಗೆ ವೋಟು ಹಾಕಿದ್ರೂ ಅದು ಬಿಜೆಪಿಗೆ ಹೋಗುತ್ತದೆ ಎಂದು ಕಾಂಗ್ರೆಸ್ ಸೇರಿ ಹಲವು ಪಕ್ಷಗಳು ಆರೋಪಿಸಿತ್ತು. ಕಾಂಗ್ರೆಸ್ ನಾಯಕರು ಒಂದು ಹೆಜ್ಜೆ ಮುಂದೆ ಹೋಗಿ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದರು. ಈಗ ದೂರು ನೀಡಿದ್ದಕ್ಕೆ ಸ್ವತಃ ಸಂಸದ ವೀರಪ್ಪ ಮೊಯ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ನಾನು ಈ ಹಿಂದೆ ಕಾನೂನು ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗಲೇ ಇವಿಎಂ ಜಾರಿಗೆ ತಂದಿದ್ದೇವೆ. ಅಂದೇ ಈ ರೀತಿಯ ಆರೋಪಗಳು ಕೇಳಿ ಬಂದಿತ್ತು. ಆದರೆ ಅದರಲ್ಲಿ ಯಾವುದೇ ಆದರಲ್ಲಿ ಲೋಪದೋಷಗಳಿಲ್ಲ. ಒಂದುವೇಳೆ ಲೋಪದೋಷಗಳಿದೆ ಅನ್ನೋದಾದ್ರೆ ಕಾಂಗ್ರೆಸ್‍ನ ಹಿರಿಯ ಮುಖಂಡರು ನನ್ನನ್ನು ಸಂಪರ್ಕಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ಇದುವರೆಗೂ ಯಾರೂ ಸಂಪರ್ಕಿಸಿಲ್ಲ ಎಂದು ಕಿಡಿ ಕಾರಿದ್ದಾರೆ. ಯಾರೆಲ್ಲ ಸೋತಿದ್ದಾರೋ ಅವರೆಲ್ಲ ಈಗ ಇವಿಎಂ ದೂಷಿಸುವುದು ಸರಿಯಲ್ಲ ಎಂದು ವೀರಪ್ಪ ಮೊಯ್ಲಿ ಹೇಳಿದರು.
ಕಾಂಗ್ರೆಸ್ ತೃಣಮೂಲ ಕಾಂಗ್ರೆಸ್, ಎನ್ ಸಿಪಿ ಸೇರಿದಂತೆ ಇತರೆ ಎಡಪಕ್ಷಗಳು ಕಳೆದ ಫೆಬ್ರವರಿಯಲ್ಲಿ ನಡೆದ ಪಂಚರಾಜ್ಯ ಚುನಾವಣೆ ವೇಳೆ ಮತಯಂತ್ರಗಳು ದೋಷದಿಂದ ಕೂಡಿದ್ದವು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com