ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಿಂಚಣಿ ಯೋಜನೆ ರದ್ದುಗೊಳಿಸಿದ ಯೋಗಿ ಸರ್ಕಾರ

ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಉತ್ತರ ಪ್ರದೇಶದಲ್ಲಿ ಈ ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರ ಜಾರಿಗೆ ತಂದಿದ್ದ....
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಲಖನೌ: ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಉತ್ತರ ಪ್ರದೇಶದಲ್ಲಿ ಈ ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರ ಜಾರಿಗೆ ತಂದಿದ್ದ ಸಮಾಜವಾದಿ ಪಿಂಚಣಿ ಯೋಜನೆಯನ್ನು ಮಂಗಳವಾರ ರಾತ್ರಿ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ಯೋಜನೆಗಳನ್ನು ಯೋಗಿ ಆದಿತ್ಯನಾಥ್ ಅವರು ಪರಿಶೀಲಿಸುತ್ತಿದ್ದು, ಸಮಾಜವಾದಿ ಪಿಂಚಣಿ ಯೋಜನೆಯನ್ನು ಈ ಕೂಡಲೇ ಸ್ಥಗಿತಗೊಳಿಸುವಂತೆ ಮತ್ತು ಆ ಯೋಜನೆಯ ಫಲಾನುಭವಿಗಳು ಪಿಂಚಣಿ ಪಡೆಯಲು ಅರ್ಹರೇ ಎಂಬುದನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿರುವುದಾಗಿ ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಸಮಾಜವಾದಿ ಪಿಂಚಣಿ ಯೋಜನೆಯ ಫಲಾನುಭಿಗಳ ಪಟ್ಟಿಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಯೋಗಿ ಆದಿತ್ಯನಾಥ್ ಒಂದು ತಿಂಗಳ ಗಡುವು ನೀಡಿದ್ದಾರೆ. ಅಲ್ಲದೆ ಈ ಯೋಜನೆಯನ್ನು ಮುಖ್ಯಮಂತ್ರಿ ಪಿಂಚಣಿ ಯೋಜನೆ ಎಂದು ಮರುನಾಮಕರಣ ಮಾಡುವಂತೆ ಸಲಹೆ ನೀಡಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ.
ಈ ಯೋಜನೆಯಡಿ ಬಿಪಿಎಲ್ ಕುಟುಂಬಕ್ಕೆ ಪ್ರತಿ ತಿಂಗಳಿಗೆ 500 ರುಪಾಯಿ ಪಿಂಚಣಿ ನೀಡಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com