ಇವಿಎಂ ವಿವಾದ: ಚುನಾವಣಾ ಆಯೋಗದ 'ಓಪನ್ ಚಾಲೆಂಜ್' ಪ್ರಶ್ನಿಸಿದ ಕೇಜ್ರಿವಾಲ್

ಇವಿಎಂ (ವಿದ್ಯುನ್ಮಾನ ಮತಯಂತ್ರ) ವಿವಾದ ಸಂಬಂಧ ರಾಜಕೀಯ ಪಕ್ಷಗಳಿಗೆ ಓಪನ್ ಚಾಲೆಂಜ್ ಹಾಕಿದ್ದ ಚುನಾವಣಾಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಗುರುವಾರ ಪ್ರಶ್ನೆ ಹಾಕಿದ್ದಾರೆ...
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ನವದೆಹಲಿ: ಇವಿಎಂ (ವಿದ್ಯುನ್ಮಾನ ಮತಯಂತ್ರ) ವಿವಾದ ಸಂಬಂಧ ರಾಜಕೀಯ ಪಕ್ಷಗಳಿಗೆ ಓಪನ್ ಚಾಲೆಂಜ್ ಹಾಕಿದ್ದ ಚುನಾವಣಾಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಗುರುವಾರ ಪ್ರಶ್ನೆ ಹಾಕಿದ್ದಾರೆ. 
ಪಂಚರಾಜ್ಯ ಚುನಾವಣೆ ನಂತರ ವಿರೋಧ ಪಕ್ಷಗಳು ವಿದ್ಯುನ್ಮಾನ ಮತಯಂತ್ರ (ಇವಿಎಂ)ನಲ್ಲಿ ದೋಷವಿದೆ ಎಂದು ಆರೋಪಿಸುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಯಂತ್ರವನ್ನು ಹ್ಯಾಕ್ ಮಾಡುವಂತೆ ಓಪವ್ ಚಾಲೆಂಜ್ ಹಾಕಿತ್ತು. ಮೇ ತಿಂಗಳ ಮೊದಲ ವಾರ ತಜ್ಞರು, ವಿಜ್ಞಾನಿಗಳು, ತಂತ್ರಜ್ಞರು ಒಂದು ವಾರದ ಮಟ್ಟಿಗೆ ಅಥವಾ 10 ದಿನಗಳ ಮಟ್ಟಿಗೆ ಆಗಮಿಸಿ ವಿದ್ಯುನ್ಮಾನ ಮತಯಂತ್ರಗಳನ್ನು ಹ್ಯಾಕ್ ಮಾಡಲು ಪ್ರಯತ್ನಿಸಲಿ ಎಂದು ಹೇಳಿದೆ ಎಂದು ಪಿಟಿಐ ವರದಿ ಮಾಡಿತ್ತು. 
ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್ ಅವರು, ಚುನಾವಣಾ ಆಯೋಗ ಯಾವ ಕಾರಣಕ್ಕೆ ಅಧಿಕೃತವಾಗಿ ಹೇಳಿಕೆ ನೀಡಲು ನಿರಾಕರಿಸುತ್ತಿದೆ ಎಂಬುದನ್ನು ನೋಡಿದರೆ ಆಶ್ಚರ್ಯವಾಗುತ್ತಿದೆ. ಸುದ್ದಿ ಮಾಧ್ಯಮಗಳು ಮೂಲಗಳು ತಿಳಿಸಿವೆ ಎಂದು ವರದಿ ಮಾಡುತ್ತಿವೆ. ಮೂಲಗಳಿಂದ ಏಕೆ ವರದಿಗಳನ್ನು ನೀಡಲಾಗುತ್ತಿದೆ. ಇಂತಹವುಗಳನ್ನು ಎಷ್ಟರ ಮಟ್ಟಿಗೆ ನಂಬಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ. 
ಚುನಾವಣಾ ಆಯೋಗವೇಕೆ ಅಧಿಕೃತವಾಗಿ ಹೇಳಿಕೆಯನ್ನು ನೀಡುತ್ತಿಲ್ಲ? ಚುನಾವಣಾಧಿಕಾರಿಗಳಾರಾದರೂ ಅಧಿಕೃತವಾಗಿ ಹೇಳಿಕೆಯನ್ನು ನೀಡಿರುವುದನ್ನು ಯಾರಾದರೂ ನೋಡಿದ್ದಾರೆಯೇ? ನಿನ್ನೆ ಸಂಜೆಯಿಂದಲೂ ನಾನುಈ ಬಗ್ಗೆ ಮಾಹಿತಿಯನ್ನು ಕಲೆಹಾಕಲು ಯತ್ನಿಸುತ್ತಿದ್ದೇನೆ. ಈ ವರದಿ ಸರಿಯಾಗಿದೆಯೇ...? ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com