ಮುಂದಿನ ವರ್ಷದಿಂದ ನೀಟ್ ಗೆ ಉರ್ದು ಸೇರಿಸಿ: ಕೇಂದ್ರಕ್ಕೆ ಸುಪ್ರೀಂ ಆದೇಶ

2018-19ನೇ ಸಾಲಿನಿಂದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯಲ್ಲಿ ಉರ್ದು ಭಾಷೆಯನ್ನು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: 2018-19ನೇ ಸಾಲಿನಿಂದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯಲ್ಲಿ ಉರ್ದು ಭಾಷೆಯನ್ನು ಸೇರಿಸುವಂತೆ ಗುರುವಾರ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ 2017, ಮೇ 7ರಂದು ನಡೆಯುವ ನೀಟ್ ಪರೀಕ್ಷೆಯಲ್ಲಿ ಉರ್ದು ಭಾಷೆಯಲ್ಲಿ ಬರೆಯಲು ಅವಕಾಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರ, ನ್ಯಾಯಮೂರ್ತಿ ಎಂ.ಎಂ.ಖನ್ವಿಲ್ಕರ್  ಹಾಗೂ ನ್ಯಾಯಮೂರ್ತಿ ಎಂ.ಎಂ.ಶಾಂತನಗೌಡರ್ ಅವರನ್ನೊಳಗೊಂಡ ಸುಪ್ರೀಂ ಪೀಠ, ಇದೇ ವರ್ಷ ಉರ್ದು ಸೇರಿಸಲು ಸರ್ಕಾರಕ್ಕೆ ಸಾಧ್ಯವಿಲ್ಲ. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಉರ್ದು ಸೇರಿಸುವಂತೆ ಆದೇಶಿಸಿದೆ.
ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಉರ್ದು ಮಾಧ್ಯಮದಲ್ಲಿ ಬರೆಯಲು ಅವಕಾಶ ನೀಡದೆ ಕೋಮು ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದ ಭಾರತೀಯ ಇಸ್ಲಾಮಿಕ್ ವಿದ್ಯಾರ್ಥಿಗಳ ಒಕ್ಕೂಟ(ಎಸ್ಐಒ), ನೀಟ್ ಪರೀಕ್ಷೆಯನ್ನು ಉರ್ದು ಮಾಧ್ಯಮದಲ್ಲಿ ಬರೆಯಲು ಅವಕಾಶ ನೀಡುಬೇಕು ಎಂದು ಕೋರ್ಟ್ ಗೆ ಮನವಿ ಮಾಡಿತ್ತು. ಅಲ್ಲದೆ ಇದೇ ವರ್ಷದಿಂದಲೇ ಅವಕಾಶ ನೀಡಬೇಕು ಎಂದು ಮನವಿ ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com