ಚುನಾವಣೆ ಸೋಲಿನಿಂದ ಪಾಠ ಕಲಿತ ಆಪ್, ಮೋದಿ ವಿರುದ್ಧ ವಾಗ್ದಾಳಿ ನಡೆಸದಿರಲು ನಿರ್ಧಾರ

ಇತ್ತೀಚಿಗೆ ನಡೆದ ದೆಹಲಿಯ ರಾಜೋರಿ ಉಪ ಚುನಾವಣೆ ಹಾಗೂ ಗೋವಾ, ಪಂಜಾಬ್ ವಿಧಾನಸಭೆ ಚುನಾವಣೆಯ ಸೋಲಿನಿಂದ....
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ನವದೆಹಲಿ: ಇತ್ತೀಚಿಗೆ ನಡೆದ ದೆಹಲಿಯ ರಾಜೋರಿ ಉಪ ಚುನಾವಣೆ ಹಾಗೂ ಗೋವಾ, ಪಂಜಾಬ್ ವಿಧಾನಸಭೆ ಚುನಾವಣೆಯ ಸೋಲಿನಿಂದ ಎಚ್ಚೆತ್ತುಕೊಂಡಿರುವ ಆಮ್ ಆದ್ಮಿ ಪಕ್ಷ ತನ್ನ ಚುನಾವಣಾ ಪ್ರಚಾರ ತಂತ್ರವನ್ನು ಬದಲಾಯಿಸಿಕೊಂಡಿದ್ದು, ದೆಹಲಿ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸದಿರಲು ನಿರ್ಧರಿಸಿದೆ.
2015ರ ದೆಹಲಿ ವಿಧಾನಸಭೆ ಚುವಾವಣೆ ರೀತಿ ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಸಕಾರಾತ್ಮಕ ಪ್ರಚಾರ ಮಾಡಲಾಗುವುದು ಎಂದು ಪಕ್ಷದ ಹಿರಿಯ ನಾಯಕರು ತಿಳಿಸಿದ್ದಾರೆ.
ದೆಹಲಿ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಸಕಾರಾತ್ಮಕ ಪ್ರಚಾರ ನಡೆಸಲಾಗುವುದು. ಪ್ರಧಾನಿ ಮೋದಿ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದರೆ ಅದು ನಮಗೆ ತಿರುಗುಬಾಣವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com