ಹೌರಾ(ಪಶ್ಚಿಮ ಬಂಗಾಳ): ಚಲಿಸುತ್ತಿದ್ದ ರೈಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಮೂವರು ವಿದ್ಯಾರ್ಥಿಗಳು ದಾರುಣ ಸಾವನ್ನಪ್ಪಿರುವ ಘಟನೆ ಹೌರಾದಲ್ಲಿ ನಡೆದಿದೆ.
ಪಶ್ಚಿಮ ಬಂಗಾಳದ ಬೆಲ್ಲೂರ್ ಮತ್ತು ಲಿಲೂಹಾ ರೈಲ್ವೆ ನಿಲ್ದಾಣದ ಬಳಿ ಈ ದುರ್ಘಟನೆ ನಡೆಸಿದೆ. ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ವಿದ್ಯಾರ್ಥಿಗಳು ಆಯಾ ತಪ್ಪಿ ಕೆಳಗೆ ಬಿದ್ದಿದ್ದಾರೆ. ಇದರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೇ, ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.