ಮೇ ಮೊದಲ ವಾರದಲ್ಲಿ ದಕ್ಷಿಣ ಏಷ್ಯಾ ಉಪಗ್ರಹ ಉಡಾವಣೆ, ಪಾಕಿಸ್ತಾನದ ಹೆಸರನ್ನು ಕೈಬಿಟ್ಟ ಇಸ್ರೋ!

ಕ್ಷಿಣ ಏಷ್ಯಾ ರಾಷ್ಟ್ರಗಳಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಇಸ್ರೋ ಉಪಗ್ರಹ ಉಡಾವಣೆಯನ್ನು ಘೋಷಿಸಿದೆ. ಆದರೆ ಪಾಕಿಸ್ತಾನದ ಹೆಸರನ್ನು ಯೋಜನೆಯಿಂದ ಕೈಬಿಡಲಾಗಿದೆ.
ಇಸ್ರೋ
ಇಸ್ರೋ
Updated on: 
ನವದೆಹಲಿ: ದಕ್ಷಿಣ ಏಷ್ಯಾ ರಾಷ್ಟ್ರಗಳಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಇಸ್ರೋ ಉಪಗ್ರಹ ಉಡಾವಣೆಯನ್ನು ಘೋಷಿಸಿದೆ. ಆದರೆ ಪಾಕಿಸ್ತಾನದ ಹೆಸರನ್ನು ಯೋಜನೆಯಿಂದ ಕೈಬಿಡಲಾಗಿದೆ. 
ಪಿಟಿಐ ಗೆ ದೂರವಾಣಿ ಮೂಲಕ ಸಂದರ್ಶನ ನೀಡಿರುವ ಇಸ್ರೋ ಮುಖ್ಯಸ್ಥ ಎಎಸ್ ಕಿರಣ್ ಕುಮಾರ್ ಮೇ ತಿಂಗಳ ಮೊದಲ ವಾರದಲ್ಲಿ ದಕ್ಷಿಣ ಏಷ್ಯಾ ಉಪಗ್ರಹ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ದಕ್ಷಿಣ ಏಷ್ಯಾ ರಾಷ್ಟ್ರಗಳಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸಂವಹನ ಉಪಗ್ರಹ (ಜಿಎಸ್ಎಟಿ-9) ಉಡಾವಣೆಯಾಗಲಿದ್ದು, ಮೇ.5 ಕ್ಕೆ ಶ್ರೀಹರಿಕೋಟಾದಿಂದ ಉಡಾವಣೆಯಾಗಲಿದೆ.   
ಪಾಕಿಸ್ತಾನ ಈ ಯೋಜನೆಯ ಭಾಗವಾಗಿರಲು ಬಯಸದ ಕಾರಣ ಅವರ ಹೆಸರನ್ನು ಯೋಜನೆಯಿಂದ ಕೈಬಿಡಲಾಗಿದೆ ಎಂದು ಕಿರಣ್ ಕುಮಾರ್ ಸಂದರ್ಶನದಲ್ಲಿ ತಿಳಿಸಿದ್ದಾರೆ. 2014ರಲ್ಲಿ ಕಠ್ಮಂಡುವಿನಲ್ಲಿ ನಡೆದ ಸಾರ್ಕ್ ರಾಷ್ಟ್ರಗಳ ಸಮ್ಮೇಳನದಲ್ಲಿ ಸಾರ್ಕ್ ರಾಷ್ಟ್ರಗಳಿಗಾಗಿಯೇ ಪ್ರತ್ಯೇಕ ಉಪಗ್ರಹವನ್ನು ಉಡಾವಣೆ ಮಾಡುವುದರ ಬಗ್ಗೆ ಘೋಷಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸಂವಹನ ಉಪಗ್ರಹ ನೆರೆ ರಾಷ್ಟ್ರಗಳಿಗೆ ಭಾರತ ನೀಡುತ್ತಿರುವ ಉಡುಗೊರೆ ಎಂದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com