ಅಯೋಧ್ಯೆ ರಾಮ ಮಂದಿರ ಪರ ಸಾಕಷ್ಟು ಪುರಾವೆಗಳಿವೆ: ರವಿಶಂಕರ್ ಪ್ರಸಾದ್

ಅಯೋಧ್ಯೆ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತು ಸಾಕಷ್ಟು ಪುರಾವೆಗಳಿವೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು...
ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕಾನೂನು ಸಚಿವ ರವಿಶಂಕರ್ ಪ್ರಸಾದ್
ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕಾನೂನು ಸಚಿವ ರವಿಶಂಕರ್ ಪ್ರಸಾದ್
Updated on: 
ಭುವನೇಶ್ವರ: ಅಯೋಧ್ಯೆ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತು ಸಾಕಷ್ಟು ಪುರಾವೆಗಳಿವೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಶನಿವಾರ ಹೇಳಿದ್ದಾರೆ. 
ಕೇಂದ್ರ ಹಾಗೂ ಉತ್ತರಪ್ರದೇಶ ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರವಿರುವ ಹಿನ್ನಲೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಕೇವಲ ಕಾನೂನು ಸಚಿವನಾಗಿ ಅಲ್ಲ, ಕಾನೂನು ತಜ್ಞನಾಗಿ ಹೇಳುತ್ತಿದ್ದೇನೆ ರಾಮ ಮಂದಿರ ಪರವಾಗಿ ನಮ್ಮ ಬಳಿ ಸಾಕಷ್ಟು ದಾಖಲೆಗಳಿವೆ ಎಂದು ಹೇಳಿದ್ದಾರೆ. 
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದು ಬಿಜೆಪಿ ಅಜೆಂಡಾ ಆಗಿದೆ. ನ್ಯಾಯಾಲಯದ ಆದೇಶ ಬರುವವರೆಗೂ ನಾವು ಕಾಯಬೇಕು ಎಂದು ತಿಳಿಸಿದ್ದಾರೆ. 
ಇದೇ ವೇಳೆ ಬಿಎಸ್'ಪಿ ಮುಖ್ಯಸ್ಥೆ ಮಾಯಾವತಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬಿಜೆಪಿ ಸರ್ಕಾರದ ವಿರುದ್ಧ ಮೈತ್ರಿಗೊಳ್ಳುತ್ತಿದ್ದಾರೆಂಬ ಊಹಾಪೋಹಗಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಇದು ಆವರ ಹತಾಶೆಯನ್ನು ತೋರಿಸುತ್ತದೆ. ಬಿಎಸ್ ಪಿ ಹಾಗೂ ಸಮಾಜವಾದಿ ಪಕ್ಷಗಳೆರಡೂ ಬಿಜೆಪಿಯನ್ನು ಕಂಡು ಭಯಪಡುತ್ತಿವೆ. ಹೀಗಾಗಿಯೇ ಮೈತ್ರಿ ಬಗ್ಗೆ ಮಾತನಾಡುತ್ತಿವೆ. ಅವರ ರಾಜಕೀಯ ಕಾರ್ಯಕ್ಷಮತೆಗೆ ತಕ್ಕಂತೆ ಜನರು ಉತ್ತರವನ್ನು ನೀಡಿದ್ದಾರೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com