ಅಪ್ರಚೋದಿತ ದಾಳಿ: ನಾಲ್ವರು ಪಾಕ್ ಸೈನಿಕರ ಹತ್ಯೆಗೈದ ಭಾರತೀಯ ಯೋಧರು

ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ...
ಭಾರತೀಯ ಸೇನೆ
ಭಾರತೀಯ ಸೇನೆ
ಕಲ್ಸಿಯಾನ್: ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ನಡೆಸಿದ ಗುಂಡಿನ ದಾಳಿಗೆ ನಾಲ್ವರು ಪಾಕ್ ಸೈನಿಕರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 
ಜಮ್ಮು ಮತ್ತು ಕಾಶ್ಮೀರ ನೌಶೆರಾ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ಭಾರತೀಯ ಸೇನೆ ಮೇಲೆ ಆಟೋಮೆಟಿಕ್ ಶಸ್ತ್ರಾಸ್ತ್ರಗಳು, ಮಾರ್ಟರ್ ಶೆಲ್ ಗಳ ಮೂಲಕ ಗುಂಡಿನ ದಾಳಿಯನ್ನು ನಡೆಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ಸಹ ಪ್ರತ್ಯುತ್ತರ ನೀಡುತ್ತಿದ್ದು ನಾಲ್ವರು ಪಾಕ್ ಸೈನಿಕರ ಹತ್ಯೆಗೈದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com