ಜಮ್ಮ-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ
ಜಮ್ಮು ಮತ್ತು ಕಾಶ್ಮೀರ ನೌಶೆರಾ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ಅಪ್ರಚೋದಿತ ಗುಂಡನ ದಾಳಿ ನಡೆಸುತ್ತಿದೆ ಎಂದು ಸೋಮವಾರ ತಿಳಿದುಬಂದಿದೆ...
ಕಲ್ಸಿಯಾನ್: ಜಮ್ಮು ಮತ್ತು ಕಾಶ್ಮೀರ ನೌಶೆರಾ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡನ ದಾಳಿ ನಡೆಸುತ್ತಿದೆ ಎಂದು ಸೋಮವಾರ ತಿಳಿದುಬಂದಿದೆ.
ನೌಶೆರಾ ಸೆಕ್ಟರ್ ಬಳಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನ ಸೇನೆ, ಭಾರತೀಯ ಸೇನೆ ಮೇಲೆ ಆಟೋಮೆಟಿಕ್ ಶಸ್ತ್ರಾಸ್ತ್ರಗಳು, ಮಾರ್ಟರ್ ಶೆಲ್ ಗಳ ಮೂಲಕ ಅಪ್ರಚೋದಿತ ದಾಳಿಯನ್ನು ನಡೆಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟರೀತಿಯ ಪ್ರತ್ಯುತ್ತರವನ್ನು ನೀಡುತ್ತಿದ್ದು, ಪ್ರಸ್ತುತ ಸ್ಥಳದಲ್ಲಿ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.