ಮುಸ್ಲಿಮರಿಗೆ ಮೀಸಲಾತಿ ಹೆಚ್ಚಿಸುವುದಕ್ಕೆ ಕಾನೂನು ಮಾನ್ಯತೆ ಇಲ್ಲ ಕೇಂದ್ರ ಸರ್ಕಾರದ ಮಟ್ಟದಲ್ಲಿ ಅದು ರದ್ದುಗೊಳ್ಳಲಿದೆ ಎಂದು ತೆಲಂಗಾಣ ಬಿಜೆಪಿಯ ವಕ್ತಾರ ಕೃಷ್ಣ ಸಾಗರ್ ರಾವ್ ಹೇಳಿದ್ದಾರೆ. ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ, ಹೈಕೋರ್ಟ್, ಸುಪ್ರೀಂ ಕೋರ್ಟ್ ಮೀಸಲಾತಿಯನ್ನು ಶೇ.50ಕ್ಕೆ ನಿಗದಿಪಡಿಸಿರುವುದರಿಂದ ತೆಲಂಗಾಣ ಸರ್ಕಾರದ ನಿರ್ಧಾರಕ್ಕೆ ಕಾನೂನು ಮಾನ್ಯತೆ ಸಿಗುವುದಿಲ್ಲ. ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ರಾಜ್ಯ ಬಿಜೆಪಿ ಕೋರ್ಟ್ ಮೊರೆ ಹೋಗುವುದಾಗಿ ಎಂದು ಕೃಷ್ಣ ಸಾಗರ್ ರಾವ್ ಹೇಳಿದ್ದಾರೆ.