ತಮ್ಮ ಪುತ್ರನ ಬಗ್ಗೆ ಇ.ಡಿ ಮಾಡುತ್ತಿರುವ ಆರೋಪ ಹಾಸ್ಯಾಸ್ಪದ: ಚಿದಂಬರಂ

ತಮ್ಮ ಪುತ್ರ ಕಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದೆ, ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ಕಾಂಗ್ರೆಸ್ ಮುಖಂಡ ...
ಪಿ.ಚಿದಂಬರಂ
ಪಿ.ಚಿದಂಬರಂ
ನವದೆಹಲಿ: ತಮ್ಮ ಪುತ್ರ ಕಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದೆ, ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಹೇಳಿದ್ದಾರೆ.
ತಮ್ಮ ಪುತ್ರ ಕಾರ್ತಿ ವಿದೇಶ ವಿನಿಮಯ ನಿಯಮ ಉಲ್ಲಂಘನೆ ಮಾಡಿದ್ದಾಗಿ ಜಾರಿ ನಿರ್ದೇಶನಾಲಯ ಆರೋಪಿಸುತ್ತಿದೆ. ಜಾರಿ ನಿರ್ದೇಶಾನಲಯ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಕಾರ್ತಿ ವಿರುದ್ಧ ಏನು ಕ್ರಮ ಕೈಗೊಂಡಿದೆ ಎಂಬುದರ ಬಗ್ಗೆ ಉಲ್ಲೇಖಿಸಿಲ್ಲ ಎಂದು ಚಿದಂಬರಂ ಹೇಳಿದ್ದಾರೆ.
ಕಾರ್ತಿ ಚಿದಂಬರಂ ಬಗ್ಗೆ ಜಾರಿ ನಿರ್ದೇಶನಾಲಯ ಮಾಡಿರುವ ಆರೋಪವು ಆಧಾರರಹಿತ ಮತ್ತು ಹಾಸ್ಯಾಸ್ಪದವಾಗಿದೆ. ಮೋದಿ ಸರ್ಕಾರ ನನ್ನ ಧ್ವನಿಯನ್ನು ಹತ್ತಿಕ್ಕಲಾಗುವುದಿಲ್ಲವೆಂದು ಹಿರಿಯ ಕಾಂಗ್ರೆಸ್ ನಾಯಕ ಚಿದಂಬರಂ ಹೇಳಿದ್ದಾರೆ. ಜಾರಿ ನಿರ್ದೇಶನಾಲಯಕ್ಕೆ ಆಗಾಗ್ಗೆ ಆರೋಪಗಳನ್ನು ಪುನರುಚ್ಚಿಸುವ ಚಾಳಿಯಿದೆ ಎಂದು ಚಿದಂಬರಂ ಹೇಳಿದ್ದಾರೆ.
ಕಾರ್ತಿ ಅವರು ಫೆಮಾ ಉಲ್ಲಂಘಿಸಿ ಸರ್ಕಾರಕ್ಕೆ ರು.45 ಕೋಟಿ ವಂಚಿಸಿದ್ದಾರೆ, ವಾಸನ್‌ ಕಂಪೆನಿ ರು. 2,262 ಕೋಟಿ ವಂಚಿಸಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಇ.ಡಿ. ಪ್ರಕಟಣೆ ತಿಳಿಸಿದೆ.
ಫೇಮಾ ಕಾಯ್ದೆಯನ್ನು ಉಲ್ಲಂಘಿಸಿದ್ದಕ್ಕಾಗಿ ಕಾರ್ತಿ ಚಿದಂಬರಂಗೆ  ಜಾರಿ ನಿರ್ದೇಶನಾಲಯ ಶೋಕಾಸ್ ನೊಟೀಸ್ ನೀಡಿದ್ದು, ಈ ಆರೋಪವು ಆಧಾರರಹಿತವಾಗಿದ್ದು ಎಂದು ಚಿದಂಬರಂ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com