ದೇಶ

ದೆಹಲಿ ಕಾಂಗ್ರೆಸ್ ಮುಖಂಡ ಅರವಿಂದರ್ ಸಿಂಗ್ ಲೌಲಿ ಬಿಜೆಪಿಗೆ ಸೇರ್ಪಡೆ

ದೆಹಲಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್ ನಾಯಕ ಅರವಿಂದರ್ ಸಿಂಗ್ ಲೌಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ದೆಹಲಿ ಕಾಂಗ್ರೆಸ್ ಮುಖಂಡ ಅರವಿಂದರ್ ಸಿಂಗ್ ಲೌಲಿ ಬಿಜೆಪಿಗೆ ಸೇರ್ಪಡೆ
ದೆಹಲಿ ಕಾಂಗ್ರೆಸ್ ಮುಖಂಡ ಅರವಿಂದರ್ ಸಿಂಗ್ ಲೌಲಿ ಬಿಜೆಪಿಗೆ ಸೇರ್ಪಡೆ
Published On :
ನವದೆಹಲಿ: ದೆಹಲಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್ ನಾಯಕ ಅರವಿಂದರ್ ಸಿಂಗ್ ಲೌಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ನೇತೃತ್ವದಲ್ಲಿ ಅರವಿಂದರ್ ಸಿಂಗ್ ಲೌಲಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ನಾಯಕರಾಗಿದ್ದ ಅರವಿಂದರ್ ಸಿಂಗ್ ಲೌಲಿ ದೆಹಲಿಯ ಅತ್ಯಂತ ಪ್ರಭಾವಿ ನಾಯಕರಾಗಿದ್ದು ಪಂಜಾಬಿ ಸಮುದಾಯದ ಪ್ರತಿನಿಧಿಯಾಗಿದ್ದಾರೆ.
ಎಂಸಿಡಿ ಚುನಾವಣೆಗೆ ಟಿಕೆಟ್ ಹಂಚಿಕೆ ವಿಷಯದಲ್ಲಿ ದೆಹಲಿ ಕಾಂಗ್ರೆಸ್ ನಲ್ಲಿ ಆಂತರಿಕ ಅಸಮಾಧಾನ ಉಂಟಾಗಿರುವ ಹಿನ್ನೆಲೆಯಲ್ಲಿ ಅರವಿಂದರ್ ಸಿಂಗ್ ಲೌಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ನ ಕಾರ್ಯವೈಖರಿಗೆ ಹಲವು ಹಿರಿಯ ನಾಯಕರು ಅಸಮಾಧಾನಗೊಂಡಿದ್ದು, ಸದ್ಯದಲ್ಲೇ ಅವರೂ ಸಹ ಕಾಂಗ್ರೆಸ್ ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.