ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಂವಿಧಾನಿಕ: ವೆಂಕಯ್ಯ ನಾಯ್ಡು

ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಅಸಂವಿಧಾನಿಕವಾಗಿದ್ದು,ದೇಶದ...
ಎಂ.ವೆಂಕಯ್ಯ ನಾಯ್ಡು
ಎಂ.ವೆಂಕಯ್ಯ ನಾಯ್ಡು
ಭೋಪಾಲ್: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಅಸಂವಿಧಾನಿಕವಾಗಿದ್ದು, ದೇಶದ ಹಿತದೃಷ್ಟಿ ಇರುವುದಿಲ್ಲ ಎಂದು ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದರಲ್ಲಿ ದೇಶದ ಹಿತಾಸಕ್ತಿ ಇರುವುದಿಲ್ಲ. ಅದು ಅಸಂವಿಧಾನಿಕ ಎಂದು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಬುಡಕಟ್ಟು ಪಂಗಡಗಳು, ಹಿಂದುಳಿದ ವರ್ಗಗಳು ಮತ್ತು ಮುಸಲ್ಮಾನ ಸಮುದಾಯದವರಿಗೆ ಮೀಸಲಾತಿ ಹೆಚ್ಚಿಸಿ ತೆಲಂಗಾಣ ಸರ್ಕಾರ ಮಸೂದೆ ಹೊರಡಿಸಿರುವ ಬಗ್ಗೆ ಸಚಿವರು ಈ ಪ್ರತಿಕ್ರಿಯೆ ನೀಡಿದರು.
ಈ ಹಿಂದೆ ಇಂತಹ ಕಾನೂನುಗಳನ್ನು ನ್ಯಾಯಾಲಯ ತಿರಸ್ಕರಿಸಿದೆ. ಸಂವಿಧಾನ ರಚನಕಾರರು ಧರ್ಮದ ಆಧಾರದ ಮೇಲಿನ ಮೀಸಲಾತಿಯನ್ನು ತಿರಸ್ಕರಿಸಿದ್ದರು. ಈ ವಿಷಯದಲ್ಲಿ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಧರ್ಮದ ಆಧಾರದ ಮೇಲಿನ ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆಯಿಲ್ಲ ಎಂದು ಹೇಳಿದರು.
ಆದರೆ ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವುದನ್ನು ಬಿಜೆಪಿ ವಿರೋಧಿಸುವುದಿಲ್ಲ. ಯಾವುದೇ ಜಾತಿ ಮತ್ತು ಧರ್ಮದವರಾಗಿರಲಿ ಅವರ ಏಳಿಗೆಗೆ ಶ್ರಮಿಸುವುದು  ನಮ್ಮ ಗುರಿಯಾಗಿದೆ. ಧರ್ಮದ ಆಧಾರದ ಮೇಲೆ ಭಾರತ ವಿಭಜನೆಯಾಗಿದೆ. ಇದರಿಂದ ಹೆಚ್ಚು ಸಮಸ್ಯೆ ಸೃಷ್ಟಿಯಾಗುವುದರಿಂದ ಅದು ಸಾಧ್ಯವಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com