ಪ್ರಧಾನಿಯನ್ನು ಭೇಟಿಯಾದ ಅಮೆರಿಕಾ ಎನ್ಎಸ್ಎ ಹೆಚ್ ಆರ್ ಮ್ಯಾಕ್ ಮಾಸ್ಟರ್

ಭಾರತ ಪ್ರವಾಸ ಕೈಗೊಂಡಿರುವ ಅಮೆರಿಕಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಹೆಚ್ಆರ್ ಮ್ಯಾಕ್ ಮಾಸ್ಟರ್ ಏ.18 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಪ್ರಧಾನಿಯನ್ನು ಭೇಟಿಯಾದ ಅಮೆರಿಕಾ ಎನ್ಎಸ್ಎ ಹೆಚ್ ಆರ್ ಮ್ಯಾಕ್ ಮಾಸ್ಟರ್
ಪ್ರಧಾನಿಯನ್ನು ಭೇಟಿಯಾದ ಅಮೆರಿಕಾ ಎನ್ಎಸ್ಎ ಹೆಚ್ ಆರ್ ಮ್ಯಾಕ್ ಮಾಸ್ಟರ್
ನವದೆಹಲಿ: ಭಾರತ ಪ್ರವಾಸ ಕೈಗೊಂಡಿರುವ ಅಮೆರಿಕಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಹೆಚ್ಆರ್ ಮ್ಯಾಕ್ ಮಾಸ್ಟರ್ ಏ.18 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. 
ದಕ್ಷಿಣ ಏಷ್ಯಾದ ಸ್ಥಿತಿಗತಿಗಳ ಬಗ್ಗೆ ಹೆಚ್ಚು ಚರ್ಚೆ ನಡೆದಿದ್ದು, ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಇಲಾಖೆ ಕಾರ್ಯದರ್ಶಿ ಎಸ್ ಜಯಶಂಕರ್ ಹಾಗೂ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು. 
ಪ್ರಧಾನಿ ಅವರೊಂದಿಗೆ ಸಭೆ ನಡೆಸುವುದಕ್ಕೂ ಮುನ್ನ ಮ್ಯಾಕ್ ಮಾಸ್ಟರ್ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಚರ್ಚೆ ನಡೆಸಿದ್ದು, ಭದ್ರತೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ. 
ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಮ್ಯಾಕ್ ಮಾಸ್ಟರ್ ಅಲ್ಲಿನ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಸಭೆ ನಡೆಸಿದ ಬಳಿಕ ಭಾರತಕ್ಕೆ ಆಗಮಿಸಿದ್ದಾರೆ. ಪಾಕಿಸ್ತಾನದಲ್ಲಿ ನಡೆದ ಸಭೆಯಲ್ಲಿ ಭಾರತ-ಪಾಕ್ ಸಂಬಂಧದ ಬಗ್ಗೆಯೂ ಚರ್ಚೆ ನಡೆದಿದೆ. ದಕ್ಷಿಣ ಏಷ್ಯಾ ರಾಷ್ಟ್ರಗಳ ಪ್ರವಾಸದಲ್ಲಿರುವ ಅಮೆರಿಕಾ ಎನ್ಎಸ್ ಜಿ ಮ್ಯಾಕ್ ಮಾಸ್ಟರ್ ಅಫ್ಘಾನಿಸ್ತಾನ, ಪಾಕಿಸ್ತಾನದ ನಂತರ ಭಾರತ ಪ್ರವಾಸ ಕೈಗೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com