ಬಾಬ್ರಿ ಮಸೀದಿ ಪ್ರಕರಣ: ಅಡ್ವಾಣಿ, ಜೋಷಿ ವಿರುದ್ಧದ ಆರೋಪ ಸಾಬೀತಾದರೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ಸಾಧ್ಯತೆ

2 ವರ್ಷಗಳಲ್ಲಿ ಪ್ರಕರಣದ ವಿಚಾರಣೆ ಮುಕ್ತಾಯಗೊಂಡು ತೀರ್ಪು ಹೊರಬರಲಿದ್ದು, ಒಂದು ವೇಳೆ ಆರೋಪ ಸಾಬೀತಾದರೆ ಆರೋಪ ಎದುರಿಸುತ್ತಿರುವ ನಾಯಕರಿಗೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.
ಬಾಬ್ರಿ ಮಸೀದಿ ಪ್ರಕರಣ: ಅಡ್ವಾಣಿ, ಜೋಷಿ ವಿರುದ್ಧದ ಆರೋಪ ಸಾಬೀತಾದರೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ಸಾಧ್ಯತೆ
ಬಾಬ್ರಿ ಮಸೀದಿ ಪ್ರಕರಣ: ಅಡ್ವಾಣಿ, ಜೋಷಿ ವಿರುದ್ಧದ ಆರೋಪ ಸಾಬೀತಾದರೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ಸಾಧ್ಯತೆ
ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಭೀಷ್ಮ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ ಸೇರಿ ಬಿಜೆಪಿ ನಾಯಕರ ವಿರುದ್ಧದ ಆರೋಪಗಳ ಬಗ್ಗೆ ವಿಚಾರಣೆ ನಡೆಸಲು ಈಗಾಗಲೇ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. 2 ವರ್ಷಗಳಲ್ಲಿ ಪ್ರಕರಣದ ವಿಚಾರಣೆ ಮುಕ್ತಾಯಗೊಂಡು ತೀರ್ಪು ಹೊರಬರಲಿದ್ದು, ಒಂದು ವೇಳೆ ಆರೋಪ ಸಾಬೀತಾದರೆ ಆರೋಪ ಎದುರಿಸುತ್ತಿರುವ ನಾಯಕರಿಗೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ. 
ಬಿಜೆಪಿ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಧಾರ್ಮಿಕ ಗುಂಪುಗಳ ನಡುವೆ ವೈಷಮ್ಯ ಮೂಡಿಸಿರುವ, ಸಂಚು ರೂಪಿಸಿರುವ, ಉದ್ದೇಶಪೂರ್ವಕವಾಗಿ ಎರಡು ಕೋಮುಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿರುವ ಆರೋಪ ಹೊರಿಸಲಾಗಿದ್ದು, ಈ ಆರೋಪಗಳು ಒಂದು ವೇಳೆ ಸಾಬೀತಾದರೆ ಅಪರಾಧಿಗಳಿಗೆ 2-5 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.     
ಇನ್ನು ಕರಸೇವಕರ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಡಕಾಯತಿ ಆರೋಪ ಹೊರಿಸಲಾಗಿದ್ದು, 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com