ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿದ್ದ ಅಂಗಡಿಗಳ ಮೇಲೆ ಲಾರಿ ನುಗ್ಗಿದೆ ಪರಿಣಾಮ ಇಪ್ಪತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಲವರಿಗೆ ಗಾಯಗಳಾಗಿವೆ. ಇದರಲ್ಲಿ ಹಲವರ ಪರಿಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ಗಾಯಾಳುಗಳನ್ನು ತಿರುಪತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.