ಜೆಡಿಯು ವಕ್ತಾರ ಕೆಸಿ ತ್ಯಾಗಿ ಈ ಬಗ್ಗೆ ಹೇಳಿಕೆ ನೀಡಿದ್ದು, ರಾಷ್ಟ್ರಪತಿ ಚುನಾವಣೆಗೆ ಬಗ್ಗೆ ಪ್ರಧಾನ ಚರ್ಚೆ ನಡೆಯದೇ ಇದ್ದರೂ ಸಹ ರಾಷ್ಟ್ರದ ಹಿತದೃಷ್ಟಿಯಿಂದ ಎನ್ ಡಿಎ ವಿರುದ್ಧ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ 2019 ರ ಚುನಾವಣೆಗೂ 2015 ರ ಮಾದರಿಯಲ್ಲೇ ಮಹಾ ಮೈತ್ರಿಕೂಟವನ್ನು ರಚಿಸುವ ಬಗ್ಗೆಯೂ ಜೆಡಿಯು ಚಿಂತನೆ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಲ್ಲಾ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.